ETV Bharat / state

ಕೆಮ್ಮಣ್ಣು ಗುಂಡಿಗೆ ಹೋಗುವ ರಸ್ತೆಯಲ್ಲಿ ಭೂಕುಸಿತ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣು ಗುಂಡಿಗೆ ಹೋಗುವ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ.

author img

By

Published : Aug 14, 2022, 8:19 AM IST

Landslide on Kemmangundi road
ಕೆಮ್ಮಣ್ಣು ಗುಂಡಿಗೆ ಹೋಗುವ ರಸ್ತೆಯಲ್ಲಿ ಭೂಕುಸಿತ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ಅನಾಹುತಗಳು ನಿಂತಿಲ್ಲ. ತರೀಕೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣು ಗುಂಡಿ ಬಳಿ ಸುಮಾರು 20 ಮೀಟರ್ ಕಾಂಕ್ರೀಟ್ ರಸ್ತೆ ಕುಸಿದಿದೆ. ಕಲ್ಲತ್ತಿಗರಿಯಿಂದ ಕೆಮ್ಮಣ್ಣುಗುಂಡಿಗೆ ಸಂಪರ್ಕ ಕಲ್ಪಿಸುವ ಮಾರ್ಗದ ಸಿಮೆಂಟ್ ರಸ್ತೆ ಬಿರುಕು ಬಿಟ್ಟಿದ್ದು ಸುಮಾರು 2 ಅಡಿಯಷ್ಟು ಕುಸಿದಿದೆ. ಈ ಮಾರ್ಗದಲ್ಲಿ ಸಂಚರಿಸಲಾಗದೆ ಕೆಲ ಪ್ರವಾಸಿಗರು ವಾಪಸ್​​ ಆಗಿದ್ದಾರೆ.

ಬಿರುಕು ಬಿಟ್ಟಿರುವ ಈ ರಸ್ತೆ ಸಂಪೂರ್ಣ ಕುಸಿದರೆ ಕೆಮ್ಮಣ್ಣು ಗುಂಡಿ ಹಾಗೂ ಹೆಬ್ಬೆ ಜಲಪಾತಕ್ಕೆ ಹೋಗುವ ಪರ್ಯಾಯ ಮಾರ್ಗವೂ ಇಲ್ಲದೆ ಸ್ಥಳೀಯರು ಹಾಗೂ ಪ್ರವಾಸಿಗರಿಗೆ ತೀವ್ರ ತೊಂದರೆಯಾಗಲಿದೆ. ಸ್ಥಳಕ್ಕೆ ಭೇಟಿ ನೀಡಿರುವ ಅಧಿಕಾರಿಗಳು 20 ಅಡಿ ಅಗಲದ ರಸ್ತೆಯಲ್ಲಿ ರಸ್ತೆ ಕುಸಿದಿರುವ ಜಾಗಕ್ಕೆ 10 ಅಡಿ ಅಗಲದ ರೇಡ್ ಟೇಪ್ ಕಟ್ಟಿ ಕೇವಲ 10 ಅಡಿ ಜಾಗದಲ್ಲೇ ವಾಹನಗಳು ಸಂಚರಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಭಾರಿ ಮಳೆ.. ಕೊಚ್ಚಿ ಹೋದ ರಸ್ತೆ, ನೆಲಕ್ಕೆ ಬಿದ್ದ ಅಡಕೆ ಮರ, ಶಾಲೆಗಳಿಗೆ ರಜೆ

ದಿನನಿತ್ಯ ನೂರಾರು ಪ್ರವಾಸಿಗರು ಕೆಮ್ಮಣ್ಣುಗುಂಡಿ ಹಾಗೂ ಸಮೀಪದ ಹೆಬ್ಬೆ ಜಲಪಾತಕ್ಕೆ ಭೇಟಿ ನೀಡುತ್ತಾರೆ. ಮಳೆಗಾಲದಲ್ಲಿ ಇಲ್ಲಿನ ಸೌಂದರ್ಯ ಇಮ್ಮಡಿಗೊಂಡಿರುತ್ತದೆ. ಇದೀಗ ಈ ಮಾರ್ಗದ ರಸ್ತೆ ಬಿರುಕು ಬಿಟ್ಟಿದ್ದು ಪ್ರವಾಸಿಗರು ಆತಂಕದಲ್ಲೇ ಸಂಚರಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.