ಚಿಕ್ಕಮಗಳೂರು: ಬೇಟೆಗಾಗಿ ಹಾಕಿದ್ದ ಉರುಳಿಗೆ ಸಿಲುಕಿ ಸ್ಥಳದಲ್ಲಿಯೇ ಚಿರತೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ದೇವರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಡು ಹಂದಿ ಬೇಟೆಗಾಗಿ ಹಾಕಿದ್ದ ಉರುಳಿಗೆ ಸಿಲುಕಿದ ಚಿರತೆ ಅದರಿಂದ ಬಿಡಿಸಿಕೊಳ್ಳಲು ಸಾಧ್ಯವಾಗದೇ ಓದ್ದಾಡಿ ಓದ್ದಾಡಿ ಸ್ಥಳದಲ್ಲಿಯೇ ಕೊನೆಯುಸಿರು ಎಳೆದಿದೆ.
ಸುಮಾರು ನಾಲ್ಕು ವರ್ಷದ ಗಂಡು ಚಿರತೆ ಸಾವನ್ನಪ್ಪಿದ್ದು, ಬೀರೂರು ವಲಯದ ಅರಣ್ಯಧಿಕಾರಿಗಳು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೀರೂರು ಅರಣ್ಯ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.