ಚಿಕ್ಕಮಗಳೂರು: ನಗರ ಹೊರವಲಯದ ಗೌಡನಹಳ್ಳಿ ಸಮೀಪ ರಸ್ತೆಯಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ನಗರದ ಕೋಟೆ ಬಡಾವಣೆಯಿಂದ ಗೌಡನಹಳ್ಳಿಗೆ ಹೋಗುವ ಇಂಡಸ್ಟ್ರಿಯಲ್ ಏರಿಯಾ ಸಮೀಪದ ರಸ್ತೆಯಲ್ಲಿ ಚಿರತೆ ಸಂಚರಿಸುತ್ತಿರುವ ದೃಶ್ಯವನ್ನು ತರಕಾರಿ ಮಾರಾಟ ಮಾಡುವ ಯುವಕರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆ ಇತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಈ ಭಾಗದಲ್ಲಿ ಹಲವಾರು ಬಾರಿ ಚಿರತೆ ಕಾಣಿಸಿಕೊಂಡಿತ್ತು. ಇದೀಗ ಮತ್ತೆ ಈ ಭಾಗದಲ್ಲಿ ಚಿರತೆ ಪ್ರತ್ಯಕ್ಷವಾಗಿರೋದು ಜನರ ಆತಂಕಕ್ಕೆ ಕಾರಣವಾಗಿದೆ.