ಚಿಕ್ಕಮಗಳೂರು : ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಮುತ್ತೋಡಿಯ ವನ್ಯಜೀವಿ ಅಭಯಾರಣ್ಯದಲ್ಲಿ ಮರಿ ಆನೆಯೊಂದು ಕೊಳೆತ ಸ್ಥಿತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ತಾಲೂಕಿನ ಮುತ್ತೋಡಿ ಅಭಯಾರಣ್ಯದಲ್ಲಿ ಸುಮಾರು ಮೂರರಿಂದ ನಾಲ್ಕು ವರ್ಷದ ಗಂಡಾನೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿ ಈ ಭಾಗದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಪ್ರಕರಣ ಬೆಳಕಿಗೆ ಬಂದಿದ್ದು, ವಿಚಾರವನ್ನು ಕೂಡಲೇ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.
ಓದಿ: ಆರೋಗ್ಯಾಧಿಕಾರಿ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ಮಂಜುನಾಥ್ ಹೇಳಿದ್ದೇನು?
ಸ್ಥಳಕ್ಕೆ ಮೇಲಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎನ್ನಲಾಗುತ್ತಿದೆ.