ಚಿಕ್ಕಮಗಳೂರು: ಜಿಲ್ಲೆಯ ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು, ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಕಗ್ಗನಹಳ್ಳಿ ಗ್ರಾಮದಲ್ಲಿ ಹರಿಯುವ ಭದ್ರಾ ನದಿಯಲ್ಲಿ ಈ ಘಟನೆ ನಡೆದಿದ್ದು, ಅದೇ ಗ್ರಾಮದ ಲೋಕೇಶ್ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಸ್ನಾನಕ್ಕೆಂದು ಭದ್ರಾ ನದಿಯಲ್ಲಿ ಇಳಿದಾಗ ಕಾಲು ಜಾರಿ ಬಿದ್ದು, ಈ ದುರಂತ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಪೋಲಿಸ್ ಇಲಾಖೆ ಹಾಗೂ ಸ್ಥಳೀಯರು ಧಾವಿಸಿ ಸತತ ಎರಡು ಗಂಟೆ ಕಾರ್ಯಾಚರಣೆ ನಡೆಸಿದ್ದು, ಮೃತ ದೇಹ ಹೊರತೆಗೆದಿದ್ದಾರೆ.
ಕಳಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.