ಮಂಗಳೂರು/ಚಿಕ್ಕಮಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಓರ್ವ ಮೃತಪಟ್ಟರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಾವುದೇ ಸಾವು ಪ್ರಕರಣ ಕಂಡು ಬಂದಿಲ್ಲ. ಇನ್ನು ಎರಡೂ ಜಿಲ್ಲೆಯ ಕೊರೊನಾ ಅಂಕಿ-ಅಂಶಗಳ ಹೀಗಿದೆ.
ಮಂಗಳೂರು :
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು ಓರ್ವ ಸಾವನ್ನಪ್ಪಿರುವ ವರದಿಯಾಗಿದೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 677 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 95 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಈವರೆಗೆ 30242 ಮಂದಿಗೆ ಕೊರೊನಾ ದೃಢಪಟ್ಟಿದೆ
ಇಂದು 171 ಮಂದಿ ಗುಣಮುಖರಾಗಿದ್ದು ಈವರೆಗೆ 27812 ಮಂದಿ ಗುಣಮುಖರಾಗಿದ್ದಾರೆ. 1,753 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 261002 ಮಂದಿಯ ತಪಾಸಣೆ ನಡೆಸಲಾಗಿದ್ದು ಇದರಲ್ಲಿ 230760 ನೆಗೆಟಿವ್ ಬಂದಿದೆ. ಈವರೆಗೆ 10,486 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು ರೂ. 1,162,237 ದಂಡ ವಸೂಲಿ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆ:
ಜಿಲ್ಲೆಯಲ್ಲಿ ಈ ದಿನ 35 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 12,359 ಕ್ಕೆ ಏರಿಕೆಯಾಗಿದೆ. ಈ ದಿನ ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 32 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈ ಸಂಖ್ಯೆ 11,698ಕ್ಕೆ ತಲುಪಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 15, ಕಡೂರು ತಾಲೂಕಿನಲ್ಲಿ 08, ತರೀಕೆರೆ ತಾಲೂಕಿನಲ್ಲಿ 09, ಕೊಪ್ಪ ತಾಲೂಕಿನಲ್ಲಿ 03 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಸಾವಿನ ಸಂಖ್ಯೆ 136ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 12,359ಕ್ಕೆ ಏರಿಕೆಯಾಗಿದ್ದು, 493 ಸಕ್ರಿಯ ಪ್ರಕರಣಗಳಿವೆ.