ಚಿಕ್ಕಮಗಳೂರು: ಗೊಬ್ಬರ ತುಂಬಿದ ಲಾರಿ ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ಕುರಿ ಗೊಬ್ಬರವನ್ನು ತುಂಬಿಕೊಂಡು ಹೋಗುವ ವೇಳೆ ಚಾಲಕನ ನಿಯಂತ್ರಣ ತಪ್ಪಿ 60 ಅಡಿಯ ಪ್ರಪಾತಕ್ಕೆ ಲಾರಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿ ಚಾಲಕ ಹಾಗೂ ಲಾರಿ ನಿರ್ವಾಹಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಬಣಕಲ್ ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.