ಚಿಕ್ಕಮಗಳೂರು : ಲಾಕ್ಡೌನ್ನಿಂದ ಜಿಲ್ಲೆಯಲ್ಲಿ ಆಗಿರುವಂತಹ ಸಮಸ್ಯೆಗಳ ಕುರಿತು ಚರ್ಚಿಸಲು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪ್ರೆಸ್ ಕ್ಲಬ್ ವತಿಯಿಂದ ಮಾಧ್ಯಮ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ. ಟಿ. ರವಿ ಸೇರಿದಂತೆ ಶಾಸಕರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಪ್ರಮುಖವಾಗಿ ಲಾಕ್ಡೌನ್ನಿಂದಾಗಿ ಆಗಿರುವಂತಹ ಸಮಸ್ಯೆಗಳು, ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ, ಕುಡಿಯುವ ನೀರು, ಕೂಲಿ ಕಾರ್ಮಿಕರು, ಹೆದ್ದಾರಿಗಳು ಹಾಗೂ ಚೆಕ್ ಪೋಸ್ಟ್ಗಳ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.
ಸಚಿವ ಸಿ.ಟಿ. ರವಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿ ಸಮಸ್ಯೆಗಳಿಗೆ ಪರಿಹಾರ ಹುಡುಕುವ ಪ್ರಯತ್ನ ಮಾಡಿದರು. ಅಲ್ಲದೇ ಪತ್ರಕರ್ತರು ನೀಡಿದ ಸಲಹೆಗಳನ್ನು ಜಿಲ್ಲಾಡಳಿತ ಸ್ವೀಕರಿಸಿದ್ದು, ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.