ಚಿಕ್ಕಮಗಳೂರು: ಮಿನಿ ಬಸ್ಸೊಂದು ಹಳ್ಳಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಮುಖ್ಯ ರಸ್ತೆಯಲ್ಲಿರುವ ಕಕ್ಕಿಂಜೆಯ ಕ್ರಾಸ್ ನಲ್ಲಿ ನಡೆದಿದೆ.
ವಿಜಯಪುರದಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಬಸ್ ಕಕ್ಕಿಂಜೆ ಕ್ರಾಸ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದೆ. ಈ ಘಟನೆಯಲ್ಲಿ 7 ಜನರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದ್ದು, ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.