ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ, ಹಲವಾರು ಅವಘಡಗಳು ಸೃಷ್ಟಿಯಾಗಿವೆ. ಭೂ ಕುಸಿತ ಸಂಭವಿಸಿದ್ದು, ಮಲೆನಾಡಿನ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ 6 ಕ್ಕೂ ಹೆಚ್ಚು ಭಾಗದಲ್ಲಿ ಭೂ ಕುಸಿತ ಉಂಟಾಗಿರುವ ಜಾಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಭೂ ಕುಸಿತದಿಂದ ಬಿದ್ದಿರುವಂತಹ ಮಣ್ಣನ್ನು ಶೀಘ್ರವಾಗಿ ತೆರವು ಮಾಡುವಂತೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗೆ ಸೂಚನೆ ನೀಡಿದರು.
ಆಗಸ್ಟ್ 11 ರ ವರೆಗೂ ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣ ಬಂದ್ ಆಗಿದ್ದು, ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧ ಮಾಡಲಾಗಿದೆ. ಈ ವೇಳೆ ಭೂಕುಸಿತದಿಂದ ಅಪ್ಪಳಿಸಿದ ಮಣ್ಣನ್ನು ತೆರವು ಮಾಡಲು ಅನುಕೂಲವಾಗಲಿದೆ ಎಂದು ಹೇಳಿದರು.