ಚಿಕ್ಕಮಗಳೂರು: ಮುಖ್ಯಮಂತ್ರಿ ಸರ್ಕಾರದ ಅನೇಕ ಕಾರ್ಯಕ್ರಮಗಳ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ನಾನು ಪೂರ್ವನಿಯೋಜಿತ ಕಾರ್ಯಕ್ರಮದ ಹಿನ್ನೆಲೆ ಒಂದು ದಿನ ತಡವಾಗಿ ದೆಹಲಿಗೆ ಹೋಗುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರಯಾಣ ವಿಚಾರ ಕುರಿತು ಕಾನೂನು ಸಚಿವ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ದೆಹಲಿ ಭೇಟಿ, ನಾಯಕತ್ವ ಬದಲಾವಣೆ, ಸಚಿವ ಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ. ನಮ್ಮ ಅಧ್ಯಕ್ಷರು ಕೂಡ ದೆಹಲಿಯಲ್ಲಿ ಇಲ್ಲ, ಜಾರ್ಖಂಡ್ನಲ್ಲಿದ್ದಾರೆ. ದೆಹಲಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ ಇಲ್ಲ. ಮುಖ್ಯಮಂತ್ರಿಗಳ ದೆಹಲಿ ಭೇಟಿ ನಂತರ ನಿಗಮ ಮಂಡಳಿ ನೇಮಕವಾಗುತ್ತೆ ಎಂದರು.
ಇದೇ ವೇಳೆ, ಹಿಜಾಬ್ ವಿವಾದ ಕುರಿತು ಮಾತನಾಡಿದ ಸಚಿವರು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆಯಾಗಿ ಸ್ಪಷ್ಟವಾದ ನಿರ್ಧಾರಕ್ಕೆ ಬರುತ್ತೆ ಎಂದರು.
ಇದನ್ನೂ ಓದಿ : ಅತೃಪ್ತ ಸಿ.ಎಂ.ಇಬ್ರಾಹಿಂ ಮನವೊಲಿಕೆಗೆ ಆಪ್ತನ ಮೂಲಕ ಸಿದ್ದರಾಮಯ್ಯ ಯತ್ನ!