ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರ ಪರವಾಗಿ ನಾವಿದ್ದೇವೆ. ನಮ್ಮ ಜೊತೆ ಬಂದ ಯಾರಿಗೂ ಬೆನ್ನಿಗೆ ಚೂರಿ ಹಾಕುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಕಡೂರು ತಾಲೂಕಿನ ಬೀರೂರಿನಲ್ಲಿ ಮಾತನಾಡಿದ ಅವರು, ಹೈಕೋರ್ಟಿನ ತೀರ್ಮಾನಕ್ಕೆ ನಾವು ಹೊಣೆಯಾಗುವುದಿಲ್ಲ. ಅವರು ಚುನಾವಣೆಯಲ್ಲಿ ಸೋತರೂ ಎಮ್ಎಲ್ಸಿ ಆಗಿದ್ದಾರೆ. ಸೋತವರಿಗೆ ಬೇರೆ ಯಾವ ಪಕ್ಷದಲ್ಲಿಲೂ ಈ ಮನ್ನಣೆ ಸಿಗುತ್ತಿರಲಿಲ್ಲ ಎಂದರು.
ಅಡ್ವೋಕೇಟ್ ಜನರಲ್ ಹಾಗೂ ನಾವು ಏನು ಮಾಡಬೇಕು ಅದನ್ನು ಮಾಡಿದ್ದೀವಿ. ಅದನ್ನು ಮೀರಿ ನ್ಯಾಯಾಲಯದ ತೀರ್ಮಾನಕ್ಕೆ ಯಾರನ್ನೂ ದೂಷಿಸುವಂತಿಲ್ಲ. ನಾವು ಅಪೀಲ್ ಸಲ್ಲಿಸಿ, ಮತ್ತೊಂದು ಪ್ರಯತ್ನ ಮಾಡುತ್ತೇವೆ. ಅವರಿಗೆ ಮೋಸ ಆಗಲು ಬಿಡುವುದಿಲ್ಲ ಎಂದು ಹೇಳಿದರು.