ETV Bharat / state

ಮಲೆನಾಡು,ಕರಾವಳಿಯಲ್ಲಿ ಭಾರೀ ಮಳೆ: ಡಿಸಿಗಳೊಂದಿಗೆ ಶೋಭಾ ಕರಂದ್ಲಾಜೆ ಸಭೆ - Minister Shobha Karandlaje

ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಭೆ ನಡೆಸಿ, ಮಳೆ, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಮಾಹಿತಿ ಪಡೆದುಕೊಂಡರು.

Minister Shobha Karandlaje
ಶೋಭಾ ಕರಂದ್ಲಾಜೆ
author img

By

Published : Jul 16, 2021, 7:17 PM IST

ಚಿಕ್ಕಮಗಳೂರು: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಭೆ ನಡೆಸಿದರು.

ದೆಹಲಿಯ ಕೃಷಿ ಭವನಕ್ಕೆ ತೆರಳಿ ವಿಡಿಯೋ ಕಾನ್ಫರನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆ, ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆ ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಜೊತೆಗೆ ಮಳೆ ಕುರಿತು ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 108 ಹಾನಿಗೊಳಗಾಗಬಹುದಾದ ಸ್ಥಳಗಳನ್ನು ಗುರುತಿಸಿದ್ದು, 49 ಜನ ವಾಲೆಂಟಿಯರ್ ತಯಾರು ಮಾಡಲಾಗುತ್ತಿದೆ. ಧರ್ಮಸ್ಥಳ ಸಂಘದ 400 ಜನರಿಗೆ ಎನ್​ಡಿಆರ್​ಎಫ್ ತಂಡ ತರಬೇತಿ ನೀಡುತ್ತಿದ್ದು, 70 ಈಜುಗಾರರು, 16 ಎನ್​ಜಿಒ ಗಳನ್ನು ನೇಮಕ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.