ಚಿಕ್ಕಮಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದು, ನಗರದ ಪ್ರವಾಸಿ ಮಂದಿರದಲ್ಲಿ ಕೋವಿಡ್-19 ಕುರಿತು ಹಾಗೂ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ನಂತರ ವೈದ್ಯಕೀಯ ಕಾಲೇಜು ಸ್ಥಾಪನೆಯ ವಿಚಾರ ಸಂಬಂಧ ನಗರದ ಹೊರವಲಯದ ಕದ್ರಿ ಮಿದ್ರಿ ಬಳಿ ಮೆಡಿಕಲ್ ಕಾಲೇಜು ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು. ನಂತರ ಶೃಂಗೇರಿಗೆ ಭೇಟಿ ನೀಡಿ ಶೃಂಗೇರಿಯಲ್ಲಿರುವ ತಾಲೂಕು ಆಸ್ಪತ್ರೆ ಪರಿಶೀಲನೆ ನಡೆಸಿದರು.
ಈ ಎಲ್ಲಾ ಕಾರ್ಯಕ್ರಮಗಳು ಮುಗಿದ ನಂತರ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವ ಕೆ.ಸುಧಾಕರ್, ಶಾರದಾಂಬೆಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ನಂತರ ನರಸಿಂಹ ವನದ ಪಕ್ಕದಲ್ಲಿರುವ ಶ್ರೀ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ನಿವಾಸಕ್ಕೆ ತೆರಳಿ ಗುರುಗಳ ಭೇಟಿ ಮಾಡಿ ಆಶೀರ್ವಾದ ಪಡೆದರು.