ಚಿಕ್ಕಮಗಳೂರು : ಕಾಮುಕನೋರ್ವ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆರೋಪಿ ಬಾಲೂರು ಹಳ್ಳಿಕೆರೆ ಮೂಲದ ಸುದೀಪ್ ಎಂದು ತಿಳಿದು ಬಂದಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಗ್ರಾಮವೊಂದರ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.