ETV Bharat / state

ಪೊಲೀಸರ ಮೇಲೆ ಲಾರಿ ಹತ್ತಿಸಲು ಪ್ರಯತ್ನಿಸಿದ ಮರಳು ದಂಧೆಕೋರರು.. - Miscreants tried to attack the police By lorry

ಅಕ್ರಮ ಮರಳು ಸಾಗಿಸುತ್ತಿದ್ದವರ ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ದುಷ್ಕರ್ಮಿಗಳು ಲಾರಿ ಹತ್ತಿಸಲು ಪ್ರಯತ್ನಿಸಿ ಕೂದಲೆಳೆ ಅಂತರದಲ್ಲಿ ಪೊಲೀಸರು ಪಾರಾಗಿದ್ದಾರೆ.

Accused
ಆರೋಪಿಗಳು
author img

By

Published : Dec 31, 2019, 5:24 PM IST

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದ್ದ ವೇಳೆ ಮರಳು ದಂಧೆಕೋರರು ಪೊಲೀಸರ ಮೇಲೆ ಲಾರಿ ಹತ್ತಿಸಲು ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಲಗೂರು ಗ್ರಾಮದಲ್ಲಿ ನಡೆದಿದೆ.

ಮರಳು ದಂಧೆಕೋರರು ಪೊಲೀಸರ ಮೇಲೆ ನಡೆಸಿದ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮೂವರು ಪೊಲೀಸರು ಪಾರಾಗಿದ್ದಾರೆ. ಆರೋಪಿ ಮೊಹಿನುದ್ದೀನ್​​ನನ್ನು ಬಂಧಿಸಲು ಪೊಲೀಸರು ಸ್ಥಳಕ್ಕೆ ಹೋದಾಗ ಈ ಘಟನೆ ನಡೆದಿದೆ.

ಆರೋಪಿ ಸೆರೆ ಹಿಡಿಯಲು ಪೊಲೀಸರ ಕಾರ್ಯಾಚರಣೆ..

ಆರೋಪಿಯನ್ನು ಬಂಧಿಸಲು ಪೊಲೀಸರು ಹರ ಸಾಹಸ ಪಡುತ್ತಿದ್ದು, ತಲಗೂರು ಗ್ರಾಮದ ಆರೋಪಿ ಮೊಹಿನುದ್ದೀನ್​ಗಾಗಿ ನೂರಾರು ಪೊಲೀಸರು ಗ್ರಾಮಕ್ಕೆ ನುಗ್ಗಿದ್ದಾರೆ. ಸದ್ಯ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಆರೋಪಿ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಐವರು ಪಿಎಸ್​​ಐ, ಐವರು ಸಿಪಿಐಗಳಿಂದ ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಜಿಲ್ಲಾ ಎಸ್ಪಿ ಹರೀಶ್ ಪಾಂಡೆ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ವರದಿ ಪಡೆದುಕೊಂಡಿದ್ದಾರೆ.

Intro:Kn_Ckm_01_Police_dalli_av_7202347Body:
ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಅಕ್ರಮ ಮರಳು ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಲು ಪೋಲಿಸರು ಹೋದಾಗ ಮರಳು ದಂಧೆ ಕೋರರು ಪೊಲೀಸರ ಮೇಲೇ ಲಾರಿ ಹತ್ತಿಸಲು ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ತಲಗೂರು ಗ್ರಾಮದಲ್ಲಿ ನಡೆದಿದೆ. ದಂಧೆಕೋರರು ಪೋಲಿಸರ ಮೇಲೆ ನೆಡೆಸಿದ ದಾಳಿಯಿಂದಾ ಕೂದಲೆಳೆ ಅಂತರದಲ್ಲಿ ಮೂವರು ಪೊಲೀಸರು ಪಾರಾಗಿದ್ದು ಆರೋಪಿ ಮೋಹಿನುದ್ದಿನ್ ಬಂಧಿಸಲು ಪೊಲೀಸರು ಸ್ಥಳಕ್ಕೇ ಹೋದಾಗ ಈ ಘಟನೆ ನಡೆದಿದೆ. ಆರೋಪಿಯನ್ನು ಬಂಧಿಸಲು ಪೋಲಿಸರು ಹರ ಸಾಹಸ ಪಡುತ್ತಿದ್ದು ತಲಗೂರು ಗ್ರಾಮದ ಆರೋಪಿ ಮೋಹಿನುದ್ದಿನ್ ಗಾಗಿ ನೂರಾರು ಪೋಲಿಸರು ಗ್ರಾಮಕ್ಕೆ ನುಗ್ಗಿದ್ದಾರೆ. ನೂರಕ್ಕೂ ಹೆಚ್ಚು ಪೊಲೀಸರು ಸ್ಥಳಕ್ಕೇ ಭೇಟಿ ನೀಡಿದ್ದು ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಆರೋಪಿ ಪರಾರಿಯಾಗಿದ್ದಾನೆ.ಸ್ಥಳಕ್ಕೇ ಐವರು ಪಿಎಸ್ ಐ, ಐವರು ಸಿಪಿಐ ಗಳಿಂದ ಕಾರ್ಯಾಚರಣೆ ನಡೆಯುತ್ತಿದ್ದು ಸ್ಥಳಕ್ಕೆ ಜಿಲ್ಲಾ ಎಸ್ಪಿ ಹರೀಶ್ ಪಾಂಡೇ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ವರದಿಯನ್ನು ಪಡೆದುಕೊಂಡಿದ್ದಾರೆ. ಏಕಾಏಕಿ ನೂರಕ್ಕೂ ಹೆಚ್ಚು ಪೊಲೀಸರ ಕಂಡು ಗ್ರಾಮದಲ್ಲಿ ಆತಂಕ ಮೂಡಿದ್ದು ಬಾಳೂರು ಪೋಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.