ETV Bharat / state

ಚಿಕ್ಕಮಗಳೂರು: ಟ್ರೆಕ್ಕಿಂಗ್​ಗೆ ಬಂದಿದ್ದ ಯುವಕ ಶವವಾಗಿ ಪತ್ತೆ

ಚಿಕ್ಕಮಗಳೂರಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿಝರಿ ಬಳಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ.

missing-youth-found-dead-in-chikkamagaluru
ಚಿಕ್ಕಮಗಳೂರು: ಟ್ರೆಕ್ಕಿಂಗ್​ಗೆ ಬಂದಿದ್ದ ಯುವಕ ಅನುಮಾನಾಸ್ಪದ ಸಾವು
author img

By ETV Bharat Karnataka Team

Published : Dec 9, 2023, 8:41 PM IST

Updated : Dec 9, 2023, 9:07 PM IST

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ರಾಣಿ ಝರಿ ಬಳಿ ಟ್ರೆಕ್ಕಿಂಗ್​ಗೆ ಬಂದಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಂಗಳೂರು ಮೂಲದ ಭರತ್ (30) ಮೃತ ಯುವಕ. ರಾಣಿಝರಿ ಬಳಿಯ ಬೆಟ್ಟವೊಂದರಿಂದ ಸುಮಾರು ಮೂರು ಸಾವಿರ ಅಡಿ ಆಳದ ಕಂದಕದಲ್ಲಿ ಮೃತದೇಹ ಸಿಕ್ಕಿದೆ. ಡಿ. 6 ರಂದು ಬೆಂಗಳೂರಿನಿಂದ ದುರ್ಗದಹಳ್ಳಿ ಸಮೀಪದ ರಾಣಿಝರಿಗೆ ಟ್ರೆಕ್ಕಿಂಗ್​ಗೆ ಬಂದಿದ್ದ ಯುವಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಕುಟುಂಬದವರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಮೊಬೈಲ್ ನಾಟ್ ರೀಚಬಲ್ ಆಗಿತ್ತು. ರಾಣಿ ಝರಿ ಬಳಿ ಯುವಕನ ಬೈಕ್ ಪತ್ತೆಯಾಗಿತ್ತು.

ಬೈಕ್ ಬಳಿ ಮೊಬೈಲ್, ಟೀ ಶರ್ಟ್ ಹಾಗೂ ಚಪ್ಪಲಿ ಸಿಕ್ಕಿದ್ದವು. ಬೈಕ್​ಗೆ ಐಡಿ ಕಾರ್ಡ್ ಮತ್ತು ಬ್ಯಾಗ್ ಸಿಕ್ಕಿಸಿ ಯುವಕ ನಾಪತ್ತೆ ಆಗಿದ್ದ. ಶುಕ್ರವಾರ ಬೆಂಗಳೂರಿನಿಂದ ಅವರ ಕುಟುಂಬದವರು ಆಗಮಿಸಿದ್ದರು. ಬಾಳೂರು ಠಾಣೆಯಲ್ಲಿ ಮಿಸ್ಸಿಂಗ್​ ಕಂಪ್ಲೇಂಟ್​ ದಾಖಲಿಸಿ ಶನಿವಾರ ಬೆಳಗ್ಗೆಯಿಂದ ಯುವಕನ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ, ಬಣಕಲ್ ಸಮಾಜ ಸೇವಕ ಆರೀಫ್ ಮತ್ತು ಅವರ ಸ್ನೇಹಿತರು ಶೋಧ ಕಾರ್ಯದಲ್ಲಿ ತೊಡಗಿದ್ದರು. ಏಳೆಂಟು ಡ್ರೋಣ್ ಕ್ಯಾಮರಾಗಳನ್ನು ಸಹ ಬಳಸಿ ಶೋಧ ಕಾರ್ಯ ನಡೆಸಲಾಗಿತ್ತು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಶವ ಪತ್ತೆ : ಇಂದು ಮಧ್ಯಾಹ್ನ ಶೋಧ ಕಾರ್ಯ ನಡೆಸುತ್ತಿದ್ದ ಸುಮಾರು 25 ಮಂದಿಯ ತಂಡ ಮೈದಾಡಿ ಕಡೆಯಿಂದ ಬೆಟ್ಟವನ್ನು ಇಳಿದು ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಮೃತದೇಹ ಪತ್ತೆ ಹಚ್ಚಿದೆ. ಸಾವಿರಾರು ಅಡಿಯಿಂದ ಯುವಕ ಕೆಳಗೆ ಬಿದ್ದಿದ್ದರಿಂದ ದೇಹ ಛಿದ್ರವಾಗಿದ್ದು, ಕೊಳೆತ ಸ್ಥಿತಿಗೆ ತಲುಪಿದೆ ಎಂದು ತಿಳಿದು ಬಂದಿದೆ. ರಾಣಿಝರಿ ಸಮೀಪದಲ್ಲಿರುವ ವ್ಯೂ ಪಾಯಿಂಟ್​ನಿಂದಲೇ ಯುವಕ ಕೆಳಗೆ ಬಿದ್ದನಾ ಎಂಬ ಶಂಕೆ ಮೂಡಿದೆ. ಯಾಕಂದ್ರೆ ವ್ಯೂ ಪಾಯಿಂಟ್ ನೇರದಲ್ಲಿಯೇ ಶವ ಪ್ರಪಾತದಲ್ಲಿ ಪತ್ತೆಯಾಗಿದೆ. ಆದ್ರೆ ಯುವಕನ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ಅಧಿಕೃತವಾಗಿ ಯಾವುದೇ ಹೇಳಿಕೆ ನೀಡಿಲ್ಲ.

ಭರತ್ ಇಂಜಿನಿಯರ್ ಪದವೀಧರನಾಗಿದ್ದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಬಾಳೂರು ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ: ಚಿಕಿತ್ಸೆಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್ ಅಪಘಾತ; ಶಿಶು ಸಹಿತ ಗರ್ಭಿಣಿ ಸಾವು

Last Updated : Dec 9, 2023, 9:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.