ಚಿಕ್ಕಮಗಳೂರು: ಪರಿಷತ್ ಉಪಸಭಾಪತಿ ಎಂ.ಕೆ ಪ್ರಾಣೇಶ್ ಅವರು ತಮ್ಮ ಪತ್ನಿ ಜೊತೆ ಬಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಪಡೆದುಕೊಂಡರು.
ಮೊದಲ ಡೋಸ್ ಅನ್ನು ಪ್ರಾಣೇಶ್ ಮೂಡಿಗೆರೆಯಲ್ಲಿ ಪಡೆದಿದ್ದಾರೆ. ಈ ಹಿಂದೆ ಕೊರೊನಾ ಸೋಂಕು ತಗುಲಿದಾಗಲೂ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.