ಚಿಕ್ಕಮಗಳೂರು : ಚಿಕ್ಕಮಗಳೂರು ಶಾಸಕ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ಸಿ.ಇ. ತಿಮ್ಮೇಗೌಡ(92) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನಾಳೆ ಬೆಳಗ್ಗೆ 11.30 ಕ್ಕೆ ತಾಲೂಕಿನ ಆಲ್ದೂರಿನ ಚಿಕ್ಕಮಾಗರವಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಭಾನುವಾರ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 11.30 ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಆಲ್ದೂರಿನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಿಮ್ಮೇಗೌಡ ಅವರು ಚಿಕ್ಕಮಾಗರವಳ್ಳಿಯವರು. ಅವರಿಗೆ ಸಿ ಟಿ ರವಿ ಸೇರಿ ಇಬ್ಬರು ಪುತ್ರರು, ಮೂವರು ಪುತ್ರಿಯರಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ