ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿದರಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 24 ವಿದ್ಯಾರ್ಥಿಗಳಿಗೆ ಹಾಗೂ ಅಂಬೇಡ್ಕರ್ ವಸತಿ ಶಾಲೆಯ 19 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಟಪಟ್ಟಿದೆ.
ಈವರೆಗೆ ಒಟ್ಟು 58 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆ ಶಾಸಕ ಎಂ.ಪಿ ಕುಮಾರಸ್ವಾಮಿ ಬಿದರಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ, ಸೋಂಕಿತ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.
ಚಿಕ್ಕಮಗಳೂರಿನಲ್ಲಿ ಒಟ್ಟು 78 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಅದರಲ್ಲಿ ಬರೋಬ್ಬರಿ 58 ಮಂದಿ ವಿದ್ಯಾರ್ಥಿಗಳೇ ಇದ್ದಾರೆ. ಇದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ.
ಇದನ್ನೂ ಓದಿ: ಸಿಬ್ಬಂದಿಗೆ ಕೋವಿಡ್...ಕಲಬುರಗಿಯ ಎರಡು ಬ್ಯಾಂಕ್ ಸೇವೆ ಸ್ಥಗಿತ!