ETV Bharat / state

ಮದ್ಯಪಾನ ಮಾಡಿ ಶಾಸಕರಿಗೆ ಮನವಿ ಪತ್ರ ನೀಡಲು ಬಂದ ವಸತಿ ಶಾಲೆ ಪ್ರಾಂಶುಪಾಲ: ಅಮಾನತಿಗೆ ಸೂಚನೆ

author img

By

Published : Jun 27, 2023, 8:59 AM IST

Updated : Jun 27, 2023, 11:22 AM IST

ಕಂಠಪೂರ್ತಿ ಕುಡಿದ ಪ್ರಾಂಶುಪಾಲರೊಬ್ಬರು ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಅವರಿಗೆ ಮನವಿ ಪತ್ರ ನೀಡಲು ಬಂದಿದ್ದರು. ಇದನ್ನು ಗಮನಿಸಿದ ಶಾಸಕ ಪ್ರಾಂಶುಪಾಲರನ್ನು ನಡು ರಸ್ತೆಯಲ್ಲೇ ತರಾಟೆಗೆ ತೆಗೆದುಕೊಂಡಿದ್ದಲ್ದದೇ ಆಸ್ಪತ್ರೆಗೆ ಕಳುಹಿಸಿದ್ದಾರೆ.

MLA notice to suspension of residential school principal
ಮದ್ಯಪಾನ ಮಾಡಿ ಶಾಸಕರಿಗೆ ಮನವಿ ಪತ್ರ ನೀಡಲು ಬಂದ ವಸತಿ ಶಾಲೆಯ ಪ್ರಾಂಶುಪಾಲ
ಕಂಠಪೂರ್ತಿ ಕುಡಿದ ಪ್ರಾಂಶುಪಾಲರನ್ನು ನಡು ರಸ್ತೆಯಲ್ಲೇ ತರಾಟೆಗೆ ತೆಗೆದುಕೊಂಡ ಶಾಸಕ ಪ

ಚಿಕ್ಕಮಗಳೂರು: ಮದ್ಯಪಾನ ಮಾಡಿ ಶಾಸಕರಿಗೆ ಮನವಿ ಪತ್ರ ನೀಡಲು ಬಂದ ಪ್ರಾಂಶುಪಾಲರಿಗೆ ಶಾಸಕರು ರಸ್ತೆ ಮಧ್ಯೆಯೇ ಕ್ಲಾಸ್ ತೆಗೆದುಕೊಂಡು ಆಸ್ಪತ್ರೆಗೆ ಕಳುಹಿಸಿದ ಪ್ರಸಂಗ ಜಿಲ್ಲೆಯ ಎನ್​ಆರ್ ಪುರ ತಾಲೂಕಿನ ಸಂಸೆ ಗ್ರಾಮದಲ್ಲಿ ನಡೆದಿದೆ.

ಪ್ರಕರಣದ ವಿವರ: ಎನ್​ಆರ್ ಪುರ ತಾಲೂಕಿನ ಸಂಸೆ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲ ಲೋಕ ನಾಯಕ್ ವಸತಿ ಶಾಲೆಯ ಸಮಸ್ಯೆಗಳ ಬಗ್ಗೆ ಶಾಸಕ ಟಿ.ಡಿ ರಾಜೇಗೌಡ ಅವರಿಗೆ ಮನವಿ ನೀಡಲು ಆಗಮಿಸಿದ್ದರು. ಈ ವೇಳೆ, ಅವರು ಫುಲ್ ಕುಡಿದು ಟೈಟ್ ಆಗಿರುವುದನ್ನ ಕಂಡ ಶಾಸಕ ರಸ್ತೆ ಮಧ್ಯೆಯೇ ಫುಲ್ ಗರಂ ಆಗಿದ್ದರು.

ಅಮಾನತು ಮಾಡುವಂತೆ ಸೂಚನೆ: ಸ್ಥಳದಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಪ್ರಾಂಶುಪಾಲರನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು. ಅಲ್ಲದೇ ಬ್ರೀಥಿಂಗ್ ಆಲ್ಕೋಹಾಲ್ ಆನ್ ಲೇಸರ್ ಮೂಲಕ ಪ್ರಾಂಶುಪಾಲರನ್ನು ತಪಾಸಣೆ ನಡೆಸಿದಾಗ ಮದ್ಯಪಾನ ಮಾಡಿದ್ದು ಪತ್ತೆಯಾಗಿದೆ. ಈ ಹಿನ್ನೆಲೆ ಶಿಕ್ಷಕರೇ ಹೀಗೆ ವರ್ತಿಸಿದರೆ ಮಕ್ಕಳ ಪಾಡೇನು? ಎಂದು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಕೂಡಲೇ ಸರ್ಕಾರಿ ಆಸ್ಪತ್ರೆಗೆ ಫೋನ್ ಮಾಡಿ ಆಂಬ್ಯುಲೆನ್ಸ್ ಕರೆಸಿ ಪ್ರಿನ್ಸಿಪಾಲ್ ಲೋಕ ನಾಯಕ್ ಅವರನ್ನು ವೈದ್ಯಕೀಯ ಪರೀಕ್ಷೆಗೆಂದು ಎನ್​​ಆರ್ ಪುರ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 6 ರಿಂದ 10 ನೇ ತರಗತಿವರೆಗೆ ಪ್ರಸ್ತುತ 240 ಜನ ಹೆಣ್ಣು ಮಕ್ಕಳಿದ್ದಾರೆ. ಈಗ ಮತ್ತೆ ಹೊಸದಾಗಿ 40 ಜನ ಬರುವವರು ಇದ್ದಾರೆ. ಹಾಸ್ಟೆಲ್​ನಲ್ಲಿ ವಾರ್ಡನ್ ಅಂತ ಯಾರೂ ಇಲ್ಲ. ಹೀಗಾಗಿ ವಾರ್ಡನ್ ಹಾಗೂ ಪ್ರಿನ್ಸಿಪಾಲ್ ಎರಡೂ ಹುದ್ದೆಯನ್ನು ಲೋಕ ನಾಯಕ್ ಅವರೇ ನಿರ್ವಹಿಸುತ್ತಿದ್ದಾರೆ. ಸುಮಾರು 300 ಜನ ಹೆಣ್ಣು ಮಕ್ಕಳಿರುವ ವಸತಿ ಶಾಲೆಯಲ್ಲಿ ಇಂತಹ ಪ್ರಿನ್ಸಿಪಾಲ್ ಇದ್ದರೆ ಹೆಣ್ಣು ಮಕ್ಕಳ ಗತಿ ಏನು? ಎಂದು ಶಾಸಕ ರಾಜೇಗೌಡ ಪ್ರಿನ್ಸಿಪಾಲ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಕೂಡಲೇ ಅವರನ್ನು ಅಮಾನತು ಮಾಡುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮದ್ಯಪಾನ ಮಾಡಿ ಚಲಿಸುತ್ತಿದ್ದ ಕಾರಿನ ಮೇಲೆ ಪುಷ್​ಅಪ್​: ನಶೆ ಇಳಿಸಿದ ಪೊಲೀಸರು- ವಿಡಿಯೋ

ಶಿಕ್ಷಕ ಅಮಾನತು - ತುಮಕೂರು: ಸರ್ಕಾರಿ ಶಾಲೆ ಶಿಕ್ಷಕನೊಬ್ಬ ಮದ್ಯ ಸೇವಿಸಿ ತೂರಾಡುತ್ತಲೇ ಶಾಲೆಗೆ ಬಂದ ಹಿನ್ನೆಲೆಯಲ್ಲಿ ಅಮಾನತ್ತುಗೊಂಡಿರುವ ಘಟನೆ ಇತ್ತೀಚೆಗೆ( ಕಳೆದ ಮಾರ್ಚ್​ನಲ್ಲಿ) ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿತ್ತು. ಕಾಂತರಾಜ್ ಅಮಾನತುಗೊಂಡಿರುವ ಶಿಕ್ಷಕ. ಇವರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊಸಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದರು.

ಮದ್ಯಸೇವಿಸಿ ಶಾಲೆಗೆ ಬಂದಿರುವ ವಿಚಾರ ಗ್ರಾಮಸ್ಥರ ಗಮನಕ್ಕೆ ಬರುತ್ತಿದ್ದಂತೆ ಶಾಲೆಯ ಬಳಿ ಜಮಾಯಿಸಿದ ಪೋಷಕರು, ಶಿಕ್ಷಕನನ್ನು ತರಾಟೆಗೆ ತೆಗೆದುಕೊಂಡಿದ್ದರು. ಬಳಿಕ ಕುಣಿಗಲ್ ಬಿಇಒ ತಿಮ್ಮರಾಜು ಅವರ ಗಮನಕ್ಕೆ ತಂದಿದ್ದರು. ಸ್ಥಳಕ್ಕೆ ದೌಡಾಯಿಸಿದ ಬಿಇಒ, ಶಿಕ್ಷಕ ಕಾಂತರಾಜು ಅವರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮದ್ಯ ಸೇವಿಸಿರುವುದನ್ನು ಖಚಿತಪಡಿಸಿಕೊಂಡಿದ್ದರು. ಈ ಸಂಬಂಧ ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ತುಮಕೂರು: ಕುಡಿದ ಅಮಲಿನಲ್ಲಿ ತೂರಾಡುತ್ತಲೇ ಶಾಲೆಗೆ ಬಂದ ಶಿಕ್ಷಕ ಅಮಾನತು

Last Updated : Jun 27, 2023, 11:22 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.