ಚಿಕ್ಕಮಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪೊಲೀಸ್ ಇನ್ಸ್ಪೆಕ್ಟರ್ವೋರ್ವರಿಗೆ ಅವಾಜ್ ಹಾಕಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಹೊಸದಾಗಿ ಮಲ್ಲಂದೂರು ಠಾಣೆಯ ಚಾರ್ಜ್ ತೆಗೆದುಕೊಂಡ ರವೀಶ್ಗೆ ಪೋನ್ ಮಾಡಿ ನಿಂದಿಸಿದ್ದಾರೆ ಎನ್ನಲಾಗಿದೆ.
ಯಾರನ್ನು ಕೇಳಿ ಚಾರ್ಜ್ ತೆಗೆದುಕೊಂಡೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಎಲ್ಲಿದ್ದೀಯಾ? ನಿನ್ನನ್ನು ಬೇಡ ಅಂತಾ ಹೇಳಿದ್ದೆ ತಾನೇ? ನೀನು ವಾಪಸ್ ಹೋಗು, ಠಾಣೆಯಲ್ಲಿ ಇರಬೇಡ ಎಂಬೆಲ್ಲಾ ಮಾತುಗಳು ಆಡಿಯೋದಲ್ಲಿವೆ.
ಇದನ್ನೂ ಓದಿ: ದ.ಭಾರತದ ಅತೀ ದೊಡ್ಡ ಎಲೆಕ್ಟ್ರಿಕ್ ಕಾರುಗಳ ಚಾರ್ಜಿಂಗ್ ಪಾಯಿಂಟ್ ಲೋಕಾರ್ಪಣೆ
ಗೃಹ ಸಚಿವರ ಪ್ರತಿಕ್ರಿಯೆ: ಪಿಎಸ್ಐಗೆ ಅವಾಚ್ಯವಾಗಿ ನಿಂದಿಸಿದ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರನ್ನು ಕರೆಸಿ ಮಾತನಾಡುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಮ್ಮ ಶಾಸಕರು ತಾಳ್ಮೆ ಕಳೆದುಕೊಂಡಿದ್ದಾರೆ ಅಂತ ಅನ್ಸುತ್ತೆ. ಎಂಪಿ ಕುಮಾರಸ್ವಾಮಿ ಅವರು ತಾಳ್ಮೆ ಕಳೆದುಕೊಂಡಿದ್ದಾರೆ. ಪಿಎಸ್ಐಗೆ ಅವಾಚ್ಯವಾಗಿ ನಿಂದನೆ ಮಾಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ, ನಾನು ರಿಪೋರ್ಟ್ ತರಿಸಿಕೊಳ್ಳುತ್ತೇನೆ. ಶಾಸಕರನ್ನು ಕರೆಸಿ ಮಾತನಾಡುವುದಾಗಿ ಹೇಳಿದರು.