ಚಿಕ್ಕಮಗಳೂರು : ಸುಮಾರು 50 ವರ್ಷಗಳ ಬಳಿಕ ಜನಸಂಖ್ಯೆ ಆಧಾರದ ಮೇಲೆ ಹಿಂದುಳಿದ ವರ್ಗಕ್ಕೆ ಮೀಸಲಾತಿ ಹೆಚ್ಚಿಸಿದ ಬಿಜೆಪಿ ಸರ್ಕಾರದ ನಡೆಯನ್ನು ಮೆಚ್ಚಿ ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಮಹಲ್ಗೋಡು ಗ್ರಾಮದಲ್ಲಿ ನೂರಾರು ಮಂದಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗ್ರಾಮದ 300ಕ್ಕೂ ಅಧಿಕ ಪುರುಷರು ಮತ್ತು ಮಹಿಳೆಯರು ಬಿಜೆಪಿಗೆ ಸೇರಿದ್ದಾರೆ.
ರಾಜ್ಯ ಸರ್ಕಾರ ಮೀಸಲಾತಿ ಹೆಚ್ಚಿಸಿದ್ದರಿಂದಲೇ ಬಿಜೆಪಿ ಸೇರಿದ್ದೇವೆ ಎಂದು ಹೇಳಿದ್ದಾರೆ. ಇನ್ನು ಮಹಲ್ಗೋಡು ಗ್ರಾಮದಲ್ಲಿ ಬಹುತೇಕ ಹಿಂದುಳಿದ ವರ್ಗಕ್ಕೆ ಸೇರಿದ ಕುಟುಂಬಗಳು ಮತ್ತು ಮತದಾರರಿದ್ದಾರೆ. ಎಲ್ಲರೂ ಸ್ವಯಂಪ್ರೇರಿತರಾಗಿ ಬಿಜೆಪಿ ಸೇರಿದ್ದಾರೆ. ಈ ಕಾರ್ಯಕ್ರಮದ ಸಂಬಂಧ ಗ್ರಾಮಸ್ಥರೇ ಶಾಮಿಯಾನ ತಂದು ಕಾರ್ಯಕ್ರಮ ಮಾಡಿ ಬಿಜೆಪಿ ಸೇರಿದ್ದಾರೆ. ಮಾಜಿ ಸಚಿವ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್ ಎಲ್ಲರನ್ನೂ ಪಕ್ಷಕ್ಕೆ ಸ್ವಾಗತಿಸಿದರು.
ಇದನ್ನೂ ಓದಿ : ಹೆಚ್ಡಿಕೆ ಜನರ ದಿಕ್ಕು ತಪ್ಪಿಸುತ್ತಿದ್ದಾರೆ: ಎಂಎಲ್ಸಿ ಸಿ.ಪಿ ಯೋಗೇಶ್ವರ್