ಚಿಕ್ಕಮಗಳೂರು: ರಾಜ್ಯದಲ್ಲಿ ಉಪಚುನಾವಣೆಯ ಕದನ ಮುಗಿಯುತ್ತಿದ್ದಂತೆಯೇ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕೆ ಪೈಪೋಟಿ ಪ್ರಾಂರಭವಾಗಿದೆ. ಜಿಲ್ಲೆಯ ಮೂಡಿಗೆರೆ ಶಾಸಕ ಎಂ. ಪಿ ಕುಮಾರಸ್ವಾಮಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ತನಗೂ ಸಚಿವ ಸ್ಥಾನ ಬೇಕೆಂದು ಆಗ್ರಹಿಸಿದ್ದಾರೆ.
ನಾನು ಕೂಡ ಈ ಬಾರಿ ಸಚಿವ ಸ್ಥಾನದ ಆಕಾಂಕ್ಷಿ. ನಾನು ಸಿಎಂ ಯಡಿಯೂರಪ್ಪನವರ ಮನಸ್ಸಿನಲ್ಲಿದ್ದೇನೆ. ನನಗೂ ಈ ಬಾರಿ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ. ಕೆಲವರು ನನ್ನನ್ನು ಬಿಎಸ್ವೈ ಅವರ ಮಾನಸ ಪುತ್ರ ಎಂದು ಹೇಳುತ್ತಾರೆ. ಆದ್ರೆ ನಿಜವಾಗಿಯೂ ನಾನು ಅವರ ಮಾನಸ ಪುತ್ರನೇ. ಎಂದಿಗೂ ಅವರು ಹಾಕಿದ ಗೆರೆಯನ್ನು ದಾಟಿಲ್ಲ. ಹಾಗಾಗಿ ಸಿಎಂ ಈ ಬಾರಿಯಾದರೂ ನನಗೆ ಸಚಿವ ಸ್ಥಾನ ನೀಡುತ್ತಾರೆ ಎಂಬ ನಂಬಿಕೆ ಇದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.