ಚಿಕ್ಕಮಗಳೂರು: ಲಾಕ್ಡೌನ್ ಪರಿಣಾಮ ಬಸ್ ಸಂಚಾರವಿಲ್ಲದ ಕಾರಣ ತಮ್ಮ ಸ್ಥಳಗಳಿಗೆ ಹೋಗಲಾಗದೇ ಸಂಕಷ್ಟದಲ್ಲಿದ್ದ ಕಾರ್ಮಿಕರು ಹಾಗೂ ಉದ್ಯೋಗಿಗಳಿಗೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ನೆರವಾಗಿದ್ದಾರೆ.
ಇಂದು ಮೂಡಿಗೆರೆ ತಾಲೂಕಿನಲ್ಲಿ ಶಾಸಕ ಎಂ. ಪಿ. ಕುಮಾರಸ್ವಾಮಿ ಎರಡು ಬಸ್ಗಳ ವ್ಯವಸ್ಥೆ ಕಲ್ಪಿಸುವ ಮೂಲಕ ಸುಮಾರು 66 ಜನ ಉದ್ಯೋಗಿಗಳು ಹಾಗೂ ಕಾರ್ಮಿಕರನ್ನು ಮೂಡಿಗೆರೆಯಿಂದ ಬೆಂಗಳೂರಿಗೆ ಕಳುಹಿಸಿಕೊಟ್ಟರು. ಈ ವೇಳೆ ಪ್ರಯಾಣಿಕರಿಂದ 700 ರೂ. ಸಂಗ್ರಹಿಸಲಾಗಿದೆ. ಪ್ರತಿಯೊಬ್ಬ ಪ್ರಯಾಣಿಕನಿಗೂ ಆರೋಗ್ಯ ತಪಾಸಣೆ, ಮಾಸ್ಕ್, ಸ್ಯಾನಿಟೈಜರ್ ಹಾಗೂ ಸಾಮಾಜಿಕ ಅಂತರ ಕಾಯ್ದು ಕೊಂಡೇ ಈ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇದರ ಉಪಯೋಗವನ್ನು ನೂರಾರು ಜನರು ಬಳಸಿಕೊಳ್ಳುತ್ತಿದ್ದಾರೆ.