ಚಿಕ್ಕಮಗಳೂರು: ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಸವಾರನನ್ನು ಕಾಡಾನೆ ಅಟ್ಟಾಡಿಸಿಕೊಂಡು ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ನಡೆದಿದೆ.
ಬೈಕ್ ನಲ್ಲಿ ಸುನೀಲ್ ಎಂಬ ವ್ಯಕ್ತಿ ಹೋಗುತ್ತಿದ್ದ ವೇಳೆ ಈ ಒಂಟಿ ಸಲಗ ಅಟ್ಟಾಡಿಸಿಕೊಂಡು ಬಂದಿದೆ. ಅದೃಷ್ಟವಶಾತ್ ಸುನೀಲ್ ರಸ್ತೆಯಲ್ಲಿಯೇ ಬೈಕ್ ಬಿಟ್ಟು ಓಡಿಹೋಗಿ ಜೀವ ಉಳಿಸಿಕೊಂಡಿದ್ದಾರೆ. ಈ ಕಾಡಾನೆ ಭಯದಿಂದಾ ಗ್ರಾಮದ ರಸ್ತೆಗಳಲ್ಲಿ ಸಾರ್ವಜನಿಕರು ಸಂಚಾರ ಮಾಡೋದಕ್ಕೂ ಹೆದರುವಂತಾಗಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮೀತಿ ಮೀರಿ ಹೋಗುತ್ತಿದೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಯನ್ನು ಹಿಡಿದು ಕಾಡಿಗಟ್ಟುವಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮನವಿ ಮಾಡಿಕೊಂಡಿದ್ದಾರೆ.