ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ದಿನ 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 141 ಕ್ಕೆ ಏರಿಕೆಯಾಗಿದೆ.
ಭಾನುವಾರ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ ಇಬ್ಬರು ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು 84 ಜನ ಸೋಂಕಿತರು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸೋಂಕು ಮುಕ್ತರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡರೆ, ಕಡೂರು, ಶೃಂಗೇರಿ ಹಾಗು ತರೀಕೆರೆಯಲ್ಲಿ ತಲಾ ಓರ್ವ ವ್ಯಕ್ತಿ, ಮೂಡಿಗೆರೆಯಲ್ಲಿ ಇಬ್ಬರು, ಕೊಪ್ಪ ತಾಲೂಕಿನ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಈಗಾಗಲೇ ಜಿಲ್ಲೆಯಲ್ಲಿ ಮೂವರು ಸೋಂಕಿಗೆ ಬಲಿಯಾಗಿದ್ದಾರೆ. ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 141 ಕ್ಕೆ ಏರಿಕೆಯಾಗಿದ್ದು, 54 ಸಕ್ರಿಯ ಪ್ರಕರಣಗಳಿವೆ.