ಚಿಕ್ಕಮಗಳೂರು : ಚಿಕ್ಕಮಗಳೂರಿನಿಂದ ಅಥಣಿ ಹಾಗೂ ಬೆಂಗಳೂರಿಗೆ ನೂತನ ವೇಗದೂತ ಬಸ್ ಸಂಚಾರ ಆರಂಭಗೊಂಡಿದ್ದು, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಚಿಕ್ಕಮಗಳೂರಿನ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಹಸಿರು ನಿಶಾನೆ ತೋರಿಸಿದರು.
ಮೊದಲು ಎಲ್ಲಾ ಬಸ್ಗಳಿಗೂ ವಿಶೇಷ ಪೂಜೆ ಸಲ್ಲಿಸಿ, ಅಕ್ಷತೆ ಹಾಕುವುದರ ಮೂಲಕ ಈ ಬಸ್ಗಳಿಗೆ ಚಾಲನೆ ನೀಡಿದರು. ಪ್ರಮುಖವಾಗಿ ಚಿಕ್ಕಮಗಳೂರಿನಿಂದ ಅಥಣಿಗೆ ಎರಡು ವಿಶೇಷ ಬಸ್ ಬಿಡಲಾಯಿತು. ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಜಿಲ್ಲಾ ಉತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಕಾಫಿನಾಡಿನಿಂದ, ಅಥಣಿಗೆ ಹೊಸದಾಗಿ ವೇಗದೂತ ಬಸ್ ಸಂಚಾರಕ್ಕೆ ಚಾಲನೆ ನೀಡಿದರು.
ಈ ಯೋಜನೆಯನ್ನು ಕಾಫಿನಾಡಿಗೆ ಸೀಮಿತಗೊಳಿಸದೆ ನಾಡಿನ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಜಿಲ್ಲಾ ಉತ್ಸವದ ಕಾರ್ಯಕ್ರಮದಲ್ಲಿ ಡಿಸಿಎಂ ಸವದಿ ಹೇಳಿದರು.