ETV Bharat / state

ಹೊಸ ವರ್ಷಾಚರಣೆಗೆ ಪ್ರವಾಸಿಗರ ಆಗಮನ : ಮುಳ್ಳಯ್ಯನ ಗಿರಿಯಲ್ಲಿ ಟ್ರಾಫಿಕ್​ ಜಾಮ್​

ಹೊಸ ವರ್ಷಾಚರಣೆ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮುಳ್ಳಯ್ಯನಗಿರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬಂದಿದ್ದರಿಂದ ಟ್ರಾಫಿಕ್​ ಜಾಮ್​ ಆಗಿದೆ.

new-year-celebration-traffic-jam-at-mullayyanagiri
ಹೊಸ ವರ್ಷಾಚರಣೆಗೆ ಪ್ರವಾಸಿಗರ ಆಗಮನ : ಮುಳ್ಳಯ್ಯನ ಗಿರಿಯಲ್ಲಿ ಟ್ರಾಫಿಕ್​ ಜಾಮ್​
author img

By ETV Bharat Karnataka Team

Published : Dec 31, 2023, 6:13 PM IST

Updated : Dec 31, 2023, 6:49 PM IST

ಹೊಸ ವರ್ಷಾಚರಣೆಗೆ ಪ್ರವಾಸಿಗರ ಆಗಮನ : ಮುಳ್ಳಯ್ಯನ ಗಿರಿಯಲ್ಲಿ ಟ್ರಾಫಿಕ್​ ಜಾಮ್​

ಚಿಕ್ಕಮಗಳೂರು : ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ರಾಜ್ಯದ ವಿವಿಧೆಡೆಯಿಂದ ಪ್ರವಾಸಿಗರು ಜಿಲ್ಲೆಯ ಮುಳ್ಳಯ್ಯನಗಿರಿ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ದೌಡಾಯಿಸುತ್ತಿದ್ದಾರೆ. ಇದರಿಂದ ಮುಳ್ಳಯ್ಯನ ಗಿರಿಯಲ್ಲಿ ಟ್ರಾಫಿಕ್​ ಜಾಮ್​ ಉಂಟಾಗಿದ್ದು, ಪ್ರವಾಸಿಗರು ಕಿರಿಕಿರಿ ಅನುಭವಿಸುವಂತಾಗಿದೆ.

ಮುಳ್ಳಯ್ಯನ ಗಿರಿ ರಾಜ್ಯದಲ್ಲೇ ಅತಿ ಎತ್ತರದ ಗಿರಿ ಪ್ರದೇಶವಾಗಿದ್ದು, ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಮಾತ್ರವಲ್ಲದೆ, ವಿವಿಧ ರಾಜ್ಯಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಹೊಸ ವರ್ಷಾಚರಣೆಗೆ ಮುಳ್ಳಯ್ಯನ ಗಿರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಉಂಟಾಗಿದೆ. ಮುಳ್ಳಯ್ಯನಗಿರಿ ರಸ್ತೆಯಲ್ಲಿ ಸುಮಾರು 2 ಕಿ.ಮೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ.

ಇಲ್ಲಿನ ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನ ಗಿರಿ ವೀಕ್ಷಣೆಗೆ ಪ್ರವಾಸಿಗರು ಬಂದಿದ್ದು, ರಸ್ತೆಯಲ್ಲಿ 2 ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಜಿಲ್ಲೆಯ ಹೆಚ್ಚಿನ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ದಂಡು ತುಂಬಿ ತುಳುಕುತ್ತಿದೆ. ಮುಳ್ಳಯ್ಯನಗಿರಿ, ಸೀತಾಳಯ್ಯನ ಗಿರಿ, ದತ್ತಪೀಠ, ಮಾಣಿಕ್ಯದಾರ, ಗಾಳಿಕೆರೆಗೆ ಪ್ರವಾಸಿಗರು ಲಗ್ಗೆ ಇಡುತ್ತಿದ್ದಾರೆ.

ಹೊಸ ವರ್ಷದ ಆಚರಣೆಗೆ ಪ್ರವಾಸಿಗರು ಆಗಮಿಸುತ್ತಿದ್ದು, ಹೋಂ ಸ್ಟೇ, ರೆಸಾರ್ಟ್ ಎಲ್ಲವೂ ಹೌಸ್ ಫುಲ್ ಆಗಿವೆ. ಈಗಾಗಲೇ ಹೋಂ ಸ್ಟೇ, ರೆಸಾರ್ಟ್, ಹೋಟೆಲ್​ಗಳು ಬುಕ್ ಆಗಿವೆ. ಈ ವಾರದಲ್ಲಿ ಹೆಚ್ಚಿನ ಪ್ರವಾಸಿಗರು ಆಗಮಿಸಿದ್ದು, 2024ರ ಜನವರಿ 1ಕ್ಕೆ ಸುಮಾರು ಎರಡು ಲಕ್ಷಕ್ಕೂ ಅಧಿಕ ಪ್ರವಾಸಿಗರು ಕಾಫಿನಾಡಿಗೆ ಆಗಮಿಸುವ ನಿರೀಕ್ಷೆ ಇದೆ.

ಹೊಸ ವರ್ಷಾಚರಣೆಗೆ ಸರ್ಕಾರದ ವತಿಯಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಜೊತೆಗೆ ಜಿಲ್ಲಾಡಳಿತವು ಹಲವು ಮಾರ್ಗ ಸೂಚಿಗಳನ್ನು ನೀಡಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯಾದ್ಯಂತ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ಬೆಂಗಳೂರು, ಮಂಗಳೂರು ಸೇರಿದಂತೆ ವಿವಿಧೆಡೆ ರಾತ್ರಿ ನಿರ್ದಿಷ್ಟ ಅವಧಿವರೆಗೆ ವರ್ಷಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ : ಹೊಸ ವರ್ಷಾಚರಣೆಗೆ ಬೆಂಗಳೂರು ಸಿದ್ಧವಾಗಿದೆ. ಈ ಬಾರಿ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ವಹಿಸಲು ಬೆಂಗಳೂರು ನಗರ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಸಂಬಂಧ ಈಗಾಗಲೇ ಮಾರ್ಗಸೂಚಿ ಹೊರಡಿಸಿರುವ ಸಂಚಾರ ಪೊಲೀಸರು ಇಂದು ಬೆಳಗ್ಗೆಯಿಂದಲೇ ನಗರದ ಎಂ.ಜಿ. ರೋಡ್, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾ ನಗರದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಇದನ್ನೂ ಓದಿ : 2023ರಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದ ಪ್ರಮುಖ ಘಟನಾವಳಿಗಳ ಹಿನ್ನೋಟ

Last Updated : Dec 31, 2023, 6:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.