ಚಿಕ್ಕಮಗಳೂರು: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ. ಜಿಲ್ಲೆಯ ಎನ್.ಆರ್. ಪುರ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
2020ರಿಂದ ಎನ್.ಆರ್. ಪುರ ನ್ಯಾಯಾಲಯಕ್ಕೆ ಗೈರಾದ ಹಿನ್ನೆಲೆಯಲ್ಲಿ ವಾರಂಟ್ ಜಾರಿ ಮಾಡಲಾಗಿದೆ. ಹಣದ ಬೇಡಿಕೆ, ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಮಾಜಿ ಸಚಿವ ಜೀವರಾಜ್ ಅವರು ವ್ಯಕ್ತಿಯೋರ್ವನ ವಿರುದ್ಧ ದೂರು ನೀಡಿದ್ದರು.
ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಜೀವರಾಜ್ ದೂರು ಸಲ್ಲಿಸಿದ್ದರು. ಈ ಬಗ್ಗೆ ಎನ್ ಆರ್ ಪುರ ಪೊಲೀಸ್ ಠಾಣೆಯಿಂದ ಕೋರ್ಟ್ಗೆ ಚಾರ್ಚ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಆದರೆ ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ಜೀವರಾಜ್ ನ್ಯಾಯಾಲಯಕ್ಕೆ ಹಾಜರಾಗುತ್ತಿಲ್ಲ. 2020ರಿಂದ ನಿರಂತರವಾಗಿ ನ್ಯಾಯಾಲಯಕ್ಕೆ ಗೈರಾದ ಕಾರಣ ವಾರಂಟ್ ಜಾರಿ ಮಾಡಲಾಗಿದೆ.
ಇದನ್ನೂ ಓದಿ: ಧೈರ್ಯಶಾಲಿ ಬಾಲೆ : ಬಲಾತ್ಕಾರಕ್ಕೆ ಯತ್ನಿಸಿದ ಕಾಮುಕನನ್ನ ಹಿಮ್ಮೆಟ್ಟಿಸಿದ ಎಂಟು ವರ್ಷದ ಬಾಲಕಿ!