ಚಿಕ್ಕಮಗಳೂರು : "ನನ್ನ ಸಾವಿಗೆ ನನ್ನ ಪಕ್ಷದ ಮುಖಂಡರೇ ಕಾರಣ" ಎಂದು ಸ್ಟೇಟಸ್ (WhatsApp Status) ಹಾಕಿ ಎನ್.ಆರ್.ಪುರ ತಾಲೂಕಿನ ಪಟ್ಟಣ ಪಂಚಾಯತ್ ಸದಸ್ಯೆ ಆತ್ಮಹತ್ಯೆಗೆ ಯತ್ನಿಸಿರುವ (Municipality Member suicide Attempt ) ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಅಧ್ಯಕ್ಷರ ಸ್ಥಾನ ಬಿಟ್ಟು ಕೊಡದಿದ್ದಕ್ಕೆ ಮನನೊಂದು ಎನ್.ಆರ್.ಪುರ ತಾಲೂಕಿನ ಪಟ್ಟಣ ಪಂಚಾಯತ್ ಸದಸ್ಯೆ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎನ್ನಲಾಗಿದೆ.
ನಿದ್ರೆ ಮಾತ್ರೆ (Sleeping Tablets) ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಎನ್.ಆರ್.ಪುರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಟ್ರೀಟ್ಮೆಂಟ್‌ಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುನ್ಸಿಪಾಲ್ಟಿ ಮೆಂಬರ್ ಆಗಿದ್ದಾರೆ. ಈ ಮೊದಲೇ ನಡೆದ ಮಾತುಕತೆಯಂತೆ ಪ್ರಸ್ತುತ ಅಧ್ಯಕ್ಷೆಯಾಗಿರುವ ಸುರಯ್ಯಾ ಬಾನು ಅವಧಿ ಮುಗಿದಿದೆ. ಆದರೆ, ಸುರಯ್ಯಾ ಬಾನು, ಅಧ್ಯಕ್ಷ ಸ್ಥಾನ ಬಿಟ್ಟುಕೊಡಲು ಮೀನಾಮೇಷ ಎಣಿಸುತ್ತಿದ್ದಾರೆ.
ಸುರಯ್ಯಾ ಬಾನು ರಾಜೀನಾಮೆಗೆ ಪಕ್ಷದ ಮುಖಂಡರಲ್ಲೇ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂದು ಹೇಳಲಾಗಿದೆ. ಈ ಘಟನೆಯಿಂದ ಮನನೊಂದು ಪಟ್ಟಣ ಪಂಚಾಯತ್ ಸದಸ್ಯೆ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ ಎನ್ನಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣಾ (NR Pura Police Station) ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.
ಓದಿ: ಕರ್ನಾಟಕ ಬಿಟ್ಕಾಯಿನ್ ಹಗರಣದ ಬಗ್ಗೆ ಪಕ್ಷಪಾತರಹಿತ ತನಿಖೆ ನಡೆಯಬೇಕು : ಸುರ್ಜೇವಾಲಾ