ಚಿಕ್ಕಮಗಳೂರು : ಜಿಲ್ಲೆಯ ಎನ್ಆರ್‌ಪುರ ತಾಲೂಕಿನ ಬಾಳೆಹೊನ್ನೂರಿನ ಸೀಗೊಡು ಸಮೀಪ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಓರ್ವ ಮೃತಪಟ್ಟಿದ್ದಾರೆ.
ಶೃಂಗೇರಿಯಿಂದ ಚಿಕ್ಕಮಗಳೂರು ಕಡೆಗೆ ತೆರಳುತ್ತಿದ್ದ ಟಾಟಾ ನೆಕ್ಸಾನ್ ವಾಹನವೊಂದು ರಭಸವಾಗಿ ಮರಕ್ಕೆ ಗುದ್ದಿದ ಪರಿಣಾಮ ಈ ಅಪಘಾತ ಸಂಭವಿಸಿದೆ. ಬೆಂಗಳೂರು ಮೂಲದ ವಾಹನ ಇದಾಗಿದೆ ಎಂದು ತಿಳಿದು ಬಂದಿದೆ.
ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಐವರಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಇನ್ನೋರ್ವ ವ್ಯಕ್ತಿಯ ಸ್ಥಿತಿ ಬಹಳ ಗಂಭೀರವಾಗಿದೆ. ಕಾರಿನಲ್ಲಿದ್ದ ಇತರರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
![ಭೀಕರ ಅಪಘಾತ ಅಪಘಾತ](https://etvbharatimages.akamaized.net/etvbharat/prod-images/kn-ckm-03-car-accident-av-7202347_29122021190153_2912f_1640784713_168.jpg)
ಘಟನಾ ಸ್ಥಳಕ್ಕೆ ಕೂಡಲೇ ಸ್ಥಳೀಯರು ಧಾವಿಸಿ ಅವರನ್ನೆಲ್ಲಾ ಆಸ್ಪತ್ರೆಗೆ ದಾಖಲು ಮಾಡಲು ಸಹಕರಿಸಿದ್ದಾರೆ. ಗಂಭೀರವಾಗಿರುವ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ ಹಾಗೂ ಉಳಿದ ಗಾಯಾಳುಗಳನ್ನು ಬಾಳೆಹೊನ್ನೂರು ಆಸ್ಪತ್ರೆಗೆ ರವಾನಿಸಲಾಗಿದೆ. ಬಾಳೆಹೊನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.