ETV Bharat / state

ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್​: ಮುಂದಿನ ಮೂರು ದಿನ ಭಾರಿ ಮಳೆ - Orange alert in chikkamagaluru

ಮುಂದಿನ ಮೂರು ದಿನ ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.

Orange alert in chikkamagaluru
ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್​
author img

By

Published : Aug 6, 2020, 10:27 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಆರೆಂಜ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ, ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

Orange alert in chikkamagaluru
ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್​

ಚಿಕ್ಕಮಗಳೂರು ಜಿಲ್ಲೆಯಲ್ಲಿ ಆಗಸ್ಟ್​ 7ರಿಂದ 9ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ದಿನಗಳಲ್ಲಿ ಜಿಲ್ಲೆಯಲ್ಲಿ 115. 6 ಮೀ. ಮೀ ರಿಂದ 204.4 ಮಿಲಿ ಮೀಟರ್ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತ ಕ್ರಮ ವಹಿಸಿ, ಸಾರ್ವಜನಿಕರಿಗೆ ಕೆಲ ಸೂಚನೆಗಳನ್ನು ನೀಡಿದೆ.

ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿಯೇ ಇರಬೇಕು. ವಿಪತ್ತನ್ನು ನಿಭಾಯಿಸಲು ಪೂರ್ಣ ತಯಾರಿ ಮಾಡಿಕೊಳ್ಳಬೇಕು. ಸಾರ್ವಜನಿಕರು ನದಿಗಳು ಅಥವಾ ತಗ್ಗು ಪ್ರದೇಶಗಳಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು, ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ, ಮರಗಳ ಕೆಳಗೆ, ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಇರಬೇಕು. ಎಂದು ಜಿಲ್ಲೆಯ ಜನರಿಗೆ ಮುನ್ಸೂಚನೆಯನ್ನು ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.