ETV Bharat / state

ಮೆದುಳು ನಿಷ್ಕ್ರಿಯವಾಗಿದ್ದ ಮಗನ ಅಂಗಾಂಗ ದಾನ.. ಪುತ್ರನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ.. - ಬದುಕಿಸಲು ಸಾಧ್ಯವಾಗಲ್ಲ ಎಂದು ವೈದ್ಯರು

ಪುತ್ರನ ಸಾವಿನ ನೋವಿನಲ್ಲೂ ಪೋಷಕರು ಆತನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಂಡು ಬಂದಿದೆ.

Organ Donation of Brain Dysfunctional Son  Organ Donation in Chikkamagaluru  Man died in road accident  ಮೆದುಳು ನಿಷ್ಕ್ರಿಯವಾಗಿದ್ದ ಮಗನ ಅಂಗಾಂಗ ದಾನ  ಪುತ್ರನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ  ಗಾಂಗಗಳನ್ನು ದಾನ ಮಾಡಿ ಸಾರ್ಥಕತೆ  ಬದುಕಿಸಲು ಸಾಧ್ಯವಾಗಲ್ಲ ಎಂದು ವೈದ್ಯರು  ದೇಹದ ಇತರೆ ಭಾಗಗಳು ಸುರಕ್ಷಿತ
ಮೆದುಳು ನಿಷ್ಕ್ರಿಯವಾಗಿದ್ದ ಮಗನ ಅಂಗಾಂಗ ದಾನ
author img

By

Published : Dec 12, 2022, 1:06 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಡೆದಿದೆ. ಪುತ್ರನ ಸಾವಿನ ದುಃಖದಲ್ಲೂ ಪೋಷಕರು ಆತನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಈ ಘಟನೆ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ ನಡೆದಿದೆ.

ಹೊರಟ್ಟಿ ಗ್ರಾಮದ ಧನ್ಯ ಕುಮಾರ್ (37) ಎಂಬವರು ಬೈಕ್​ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್​​ ವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮೆದುಳು ಸಂಪೂರ್ಣ ನಿಷ್ಕ್ರಿಯ ಗೊಂಡಿದೆ. ಎಷ್ಟೇ ಪ್ರಯತ್ನ ಪಟ್ಟರೂ ಜೀವ ಉಳಿಸಿಕೊಳ್ಳಲಾಗಲಿಲ್ಲ .

ಆದರೆ ಧನ್ಯಕುಮಾರ್ ಅವರ ದೇಹದ ಇತರ ಭಾಗಗಳು ಸುರಕ್ಷಿತವಾಗಿದ್ದು, ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದಾರೆ. ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲಾಗುತ್ತಿದೆ. ಸದ್ಯ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯುತ್ತಿದೆ. ಮೃತರು 4 ವರ್ಷದ ಪುತ್ರಿ, ಪತ್ನಿ, ತಂದೆ - ತಾಯಿಯನ್ನು ಅಗಲಿದ್ದಾರೆ.

ಓದಿ: ನನ್ನ ಮಗಳು ಇನ್ನೂ ನಾಲ್ಕು ದಿನ ನಮ್ಮೊಂದಿಗೆ ಜೀವಿಸಬೇಕು.. ಮಗಳ ಅಂಗಾಂಗ ದಾನಕ್ಕೆ ಪೋಷಕರ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.