ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಲಾಕ್ಡೌನ್ ವೇಳೆ ಜನರಿಗೆ ಉಚಿತ ತರಕಾರಿ ವಿತರಣೆ ಮಾಡಿ ಮಾದರಿಯಾಗಿದ್ದಾರೆ.
ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯಿತಿ ಸದಸ್ಯ ನವೀನ್ ಸುಮಾರು ಒಂದು ಸಾವಿರ ಕುಟುಂಬಗಳಿಗೆ ಉಚಿತವಾಗಿ ತರಕಾರಿ ವಿತರಣೆ ಮಾಡಿದ್ದಾರೆ. ಲಾಕ್ಡೌನ್ ಹಿನ್ನೆಲೆ ಕೆಲಸವಿಲ್ಲದೆ ಮನೆಯಲ್ಲಿಯೇ ಇರುವ ಜನರಿಗಾಗಿ ನವೀನ್ ಈ ಕೆಲಸವನ್ನು ಮಾಡುತ್ತಿದ್ದಾರೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಹತ್ವದ ಆದೇಶ ಮಾಡಿದ್ದು, ಇಂದಿನಿಂದ ಭಾನುವಾರ ಬೆಳಗ್ಗೆ 6 ಗಂಟೆಯವರೆಗೂ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಿದ್ದಾರೆ.
ಓದಿ: ರಾಮನಗರ: ಸ್ವಂತ ಹಣದಲ್ಲಿ 20 ಆಕ್ಸಿಜನ್ ಪಾಯಿಂಟ್ ಅಳವಡಿಸಿದ ಸರ್ಕಾರಿ ವೈದ್ಯ