ಚಿಕ್ಕಮಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಹುಟ್ಟಿದ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿ ಪೋಷಕರು ಜಿಲ್ಲಾ ಸರ್ಜನ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಮಡೆನೇರಲು ಗ್ರಾಮದ ಹರೀಶ್ ಹಾಗೂ ವನಿತಾ ದಂಪತಿಗೆ ಗಂಡು ಮಗು ಜನಿಸಿತ್ತು. ಈ ವೇಳೆ, ವೈದ್ಯರು ಮಗು ಸಾವನ್ನಪ್ಪಿದೆ ಎಂದು ತಿಳಿಸಿ ಮಗುವಿನ ಮುಖವನ್ನು ನೋಡಲು ಅವಕಾಶ ನೀಡದೇ ಶವಸಂಸ್ಕಾರ ಮಾಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.
ಕುಟುಂಬಸ್ಥರು ಮನೆಗೆ ಹೋಗಿ ನೋಡಿದಾಗ ಮಗುವಿನ ಗುಪ್ತಾಂಗದ ಬಳಿ ಗಾಯವಾಗಿರುವುದು ಕಂಡು ಬಂದಿದೆ. ಅನುಮಾನಗೊಂಡ ಪೋಷಕರು ಜಿಲ್ಲಾಸ್ಪತ್ರೆಗೆ ಬಂದು ತಿಳಿಸಿದರೆ ನಿರ್ಲಕ್ಷ್ಯ ಮಾಡಿದ್ದಾರೆ. ಹೀಗಾಗಿ ಸರ್ಜನ್ ಕಚೇರಿ ಎದುರು ಮಗುವಿನ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದು, ಹೆರಿಗೆ ಮಾಡಿಸಿದ ವೈದ್ಯರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಹೆರಿಗೆ ಸಂದರ್ಭದಲ್ಲಿ ಆಪರೇಷನ್ ಸಲಕರಣೆಯಿಂದ ಪೆಟ್ಟಾಗಿ ಮಗು ಸಾವನ್ನಪ್ಪಿದೆ ಎಂದು ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿ ವೈದ್ಯೆ ಡಾ.ಆರತಿ ಅಮಾನತಿಗೆ ಒತ್ತಾಯಿಸಿದ್ದಾರೆ.
ಓದಿ: ಮೈಸೂರು ಗ್ಯಾಂಗ್ ರೇಪ್ ಕೇಸ್: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್, 5 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ