ಚಿಕ್ಕಮಗಳೂರು: ಹುಲ್ಲೆಮನೆ ಕುಂದೂರಿನಲ್ಲಿ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂಡಿಗೆರೆ ತಾಲೂಕಿನ ಹುಲ್ಲೆಮನೆ ಕುಂದೂರು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮಹಿಳೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿರುವ ಆರೋಪ ಕೇಳಿ ಬಂದಿದೆ.
ಭಾನುವಾರ ಬೆಳಗ್ಗೆ 7.30ಕ್ಕೆ ಕಾಡಾನೆ ತುಳಿದು ಮಹಿಳೆ ಸಾವನ್ನಪ್ಪಿದ್ದು, ಸಂಜೆ 6 ಗಂಟೆಗೆ ಗ್ರಾಮಕ್ಕೆ ಶಾಸಕ ಎಂ.ಪಿ.ಕುಮಾರಸ್ವಾಮಿ ತೆರಳಿದ್ದಾರೆ. ಈ ವೇಳೆ ಎಂ.ಪಿ ಕುಮಾರಸ್ವಾಮಿ ಅವರ ನಡೆಯನ್ನ ಸ್ಥಳೀಯರು ಪ್ರಶ್ನೆ ಮಾಡಿದ್ದಾರೆ. ಆಗ ಗ್ರಾಮಸ್ಥರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ. ಶಾಸಕ ಕುಮಾರಸ್ವಾಮಿ ಅವರನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡಿದ್ದು, ಪ್ರಶ್ನೆ ಮಾಡಿದ ಜನರ ಮೇಲೆ ಪೊಲೀಸರು ಲಾಠಿ ಬೀಸಿರುವ ಆರೋಪ ಕೇಳಿ ಬಂದಿದೆ.
ಇದನ್ನೂ ಓದಿ.. ಮೂಡಿಗೆರೆಯಲ್ಲಿ ಕಾಡಾನೆ ತುಳಿದು ಮಹಿಳೆ ಸಾವು; ಸ್ಥಳದಲ್ಲೇ ಶವವನ್ನಿಟ್ಟು ಗ್ರಾಮಸ್ಥರ ಪ್ರತಿಭಟನೆ
ಗ್ರಾಮದಲ್ಲಿ ಬಿಗುವಿನ ವಾತಾವರಣ.. ಶಾಸಕರು ಗ್ರಾಮಕ್ಕೆ ಆಗಮಿಸುತ್ತಿದ್ದ ಜನರು ರೊಚ್ಚಿಗೆದ್ದರು. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದ್ದು, ಗ್ರಾಮದಿಂದ ಜೀಪ್ನಲ್ಲಿ ಕೂರಿಸಿಕೊಂಡು ಶಾಸಕರನ್ನು ಪೊಲೀಸರು ಗ್ರಾಮದಿಂದ ಹೊರ ತಂದಿದ್ದಾರೆ. ಈ ವೇಳೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಹರಿದ ಬಟ್ಟೆಯಲ್ಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಇದರಲ್ಲಿ ಬೇಕು ಅಂತಾನೇ ಕೆಲವರು ಗುಂಪು ಮಾಡಿಕೊಂಡು ಹಲ್ಲೆ ಮಾಡಿದ್ದಾರೆ. ಶಾಸಕರು ಆನೆ ಸಾಕಿದ್ದಾರೆ ಎಂದು ಜನ ಹೊಡೆದು ಕಳುಹಿಸಿದರು. ಸಂಚು ಮಾಡಿ ಹಲ್ಲೆ ಮಾಡಿದ್ರು, ಇದು ಪೊಲೀಸರ ವೈಫಲ್ಯ. ನಾನು ಅಲ್ಲೇ ಇರ್ತಿದ್ದೆ. ಪೊಲೀಸ್ ಮಿಸ್ ಗೈಡ್ ಮಾಡಿ ಹೊರ ಕಳುಹಿಸಿದ್ರು. ಸಾರ್ವಜನಿಕರ ಸೇವೆ ಮಾಡಲು ಇರೋರು ಎಲ್ಲ ತಾಗ್ಯಕ್ಕೂ ರೆಡಿ ಇರ್ತೀವಿ. ಆ ಜಾಗ ಬಿಟ್ಟು ಕದಲ್ತಾ ಇರ್ಲಿಲ್ಲ ಎಂದು ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ : ಟ್ಯಾಂಕ್ ಸ್ವಚ್ಛ ಪ್ರಕರಣ: ಗ್ರಾಮದ ಎಲ್ಲಾ ತೊಂಬೆಗಳಲ್ಲಿ ನೀರು ಕುಡಿದ ದಲಿತ ಯುವಕರು