ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಹಸಿರು ನಿಶಾನೆ ತೋರಿದೆ.
ಮೂಡಿಗೆರೆ ತಾಲೂಕಿನಲ್ಲಿ ಇರುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಗ್ರೀನ್ ಸಿಗ್ನಲ್ ನೀಡಿ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರು ಸಂಚರಿಸುವ ಕೆಎಸ್ಆರ್ಟಿಸಿ ಬಸ್, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲ್ಲರ್ಸ್, ಆ್ಯಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್‌ಸಿ (ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ಸಂಚರಿಸಬಹುದು.
ಕಳೆದ ಭಾರಿ ಸುರಿದ ತೀವ್ರ ಮಳೆಗೆ ಚಾರ್ಮಾಡಿ ಘಾಟ್ ರಸ್ತೆ ಹಾನಿಗೆ ಒಳಗಾಗಿತ್ತು. ಈ ಮಾರ್ಗ ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದರಿಂದ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.