ಚಿಕ್ಕಮಗಳೂರು: ಪಿಎಫ್ಐ, ಎಸ್ಡಿಪಿಐನ ಕೆಲ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಮೂಡಿಗೆರೆ ಹಾಗೂ ಆಲ್ದೂರಿನಲ್ಲಿ ಸುಮಾರು 10 ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯಾದ್ಯಂತ ಎನ್ಐಎ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆ ಯಾವುದೇ ಪ್ರತಿಭಟನೆ ನಡೆಸದಂತೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ.

ನಿನ್ನೆಯೂ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇದೇ ವೇಳೆ, ಚಿಕ್ಕಮಗಳೂರು ನಗರದಲ್ಲಿ ಅಪ್ಪ ಮಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ಪ ಎಸ್ಡಿಪಿಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಮಗ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ಮಾಜಿ ಜಿಲ್ಲಾಧ್ಯಕ್ಷ ಇಮ್ರಾನ್ ಎಂಬುವವರನ್ನು ವಶಕ್ಕೆ ಪಡೆಯಲಾಗಿದ್ದು, ನಗರದ ಬಸವನಹಳ್ಳಿ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಠಾಣೆಯಲ್ಲಿ 5 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪಿ.ಎಫ್.ಐ, ಎಸ್.ಡಿ.ಪಿ.ಐ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ 10 ಕ್ಕೂ ಹೆಚ್ಚು ಕಾರ್ಯಕರ್ತರನ್ನ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಓದಿ: ಸಿಂತಪಲ್ಲಿಯಿಂದ ಸಿಲಿಕಾನ್ ಸಿಟಿಗೆ ಮಾದಕ ವಸ್ತು ಸರಬರಾಜು: ನಾಲ್ವರು ಮಹಿಳೆಯರು ಸಿಸಿಬಿ ಬಲೆಗೆ