ಚಿಕ್ಕಮಗಳೂರು: ಪಿಕಪ್ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಕಬ್ಬಿಣದ ವಿಭಜಕದೊಳಗೆ ನುಗ್ಗಿದ ಪರಿಣಾಮ ವಾಹನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗೇಟ್ ಬಳಿ ನಡೆದಿದೆ.
![road accident](https://etvbharatimages.akamaized.net/etvbharat/prod-images/4515619_thumb.jpg)
ಮಹಮ್ಮದ್ ಆಲಿ (22) ಮೃತ ಚಾಲಕ. ರಸ್ತೆಯಲ್ಲಿ ಹೋಗುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ(ಡಿವೈಡರ್ ಗೇಟ್)ದೊಳಗೆ ನುಗ್ಗಿದ ಪರಿಣಾಮ ಈ ದುರಂತ ಸಂಭವಿಸಿದೆ. ಇನ್ನು ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಬೀರೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.