ETV Bharat / state

ಸರಗಳ್ಳತನ ಪ್ರಕರಣ: ಚಿಕ್ಕಮಗಳೂರು ಪೊಲೀಸರಿಂದ ಇಬ್ಬರು ಆರೋಪಿಗಳ ಬಂಧನ - ಚಿಕ್ಕಮಗಳೂರು ನ್ಯೂಸ್

ಕಳೆದ ಒಂದು ವರ್ಷದಿಂದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಬಂಧಿಸಿದ್ದು, ಬಂಧಿತರಿಂದ ಒಟ್ಟು 2.15 ಲಕ್ಷ ರೂ. ಮೌಲ್ಯದ 72 ಗ್ರಾಂ ಚಿನ್ನಾಭರಣ ಮತ್ತು ಎರಡು ಬೈಕ್​ಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

chain snatchers,ಸರಗಳ್ಳರ ಬಂಧನ
author img

By

Published : Nov 7, 2019, 5:55 PM IST

ಚಿಕ್ಕಮಗಳೂರು: ಕಳೆದ ಒಂದು ವರ್ಷದಿಂದ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಷರೀಫ್​ಗಲ್ಲಿ ನಿವಾಸಿ ಮಹಮ್ಮದ್ ಅಲಿ, ಬೇಲೂರು ಹಗರೆ ನಿವಾಸಿ ಪವನ್ ಬಂಧಿತ ಆರೋಪಿಗಳು. ಇವರ ಮೇಲೆ ನಗರ ಠಾಣೆಯಲ್ಲಿ 5 ಪ್ರಕರಣಗಳು, ಗ್ರಾಮಾಂತರ ಠಾಣೆಯಲ್ಲಿ 5 ಮತ್ತು ಬಸವನಹಳ್ಳಿ ಠಾಣೆಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳಲ್ಲಿ ಈ ಆರೋಪಿಗಳು ಪೊಲೀಸರಿಗೆ ಸಿಗದೆ ಚಳ್ಳೆಹಣ್ಣು ತಿನ್ನಿಸುತ್ತಿದ್ದರು. ಕೊನೆಗೂ ಈ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಇವರು ಜನ ಕಡಿಮೆ ಇರುವ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಸರಗಳ್ಳತನ ಮಾಡುತ್ತಿದ್ದರು. ಬಂಧಿತರಿಂದ ಒಟ್ಟು 2.15 ಲಕ್ಷ ರೂ. ಮೌಲ್ಯದ 72 ಗ್ರಾಂ ಚಿನ್ನಾಭರಣ ಮತ್ತು ಎರಡು ಬೈಕ್​ಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇನ್ನೂ 7 ಜನ ಆರೋಪಿಗಳು ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.

Intro:Kn_Ckm_06_Arrest_av_7202347Body:ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ಕಳೆದ ಒಂದು ವರ್ಷಗಳಿಂದ ಚಿಕ್ಕಮಗಳೂರು ನಗರ ಮತ್ತು ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡುತ್ತಿದ್ದ ಇಬ್ಬರೂ ಆರೋಪಿಗಳನ್ನು ನಗರ ಠಾಣೆಯ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಆರೋಪಿಗಳ ಬಂಧನದಿಂದಾ ಒಟ್ಟು 11 ಸರಗಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ನಗರ ಠಾಣೆಯ ಒಟ್ಟು 5 ಪ್ರಕರಣಗಳು, ಗ್ರಾಮಾಂತರ ಠಾಣೆಯ 5 ಪ್ರಕರಣಗಳು ಮತ್ತು ಬಸವನಹಳ್ಳಿ ಠಾಣೆಯ 1 ಪ್ರಕರಣ ಸೇರಿ ಒಟ್ಟು 11 ಪ್ರಕರಣಗಳಲ್ಲಿ ಈ ಆರೋಪಿಗಳು ಪೋಲಿಸರಿಗೆ ಸಿಗದೇ ಚಳ್ಳೆಹಣ್ಣು ತಿನ್ನಿಸುತ್ತಿದ್ದರು. ಕೊನೆಗೂ ಈ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದು. ಕಳೆದ ಒಂದು ವರ್ಷಗಳಿಂದ ದ್ವಿಚಕ್ರ ವಾಹನಗಳಲ್ಲಿ ಜನ ವಿರಳ ಪ್ರದೇಶಗಳಲ್ಲಿ ಸಂಚರಿಸುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ ಆರೋಪಿತರು ಸರಗಳ್ಳತನ ಮಾಡುತ್ತಿದ್ದರು. ಬಂಧಿತ ಆರೋಪಿಗಳು ಚಿಕ್ಕಮಗಳೂರು ಷರೀಫ್ ಗಲ್ಲಿ ವಾಸಿ ಮಹಮ್ಮದ್ ಅಲಿ, ಬೇಲೂರು ಹಗರೆ ವಾಸಿ ಪವನ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಪೊಲೀಸರು 3 ಪ್ರಕರಣಗಳಿಗೆ ಸಂಬಂಧಪಟ್ಟ ಒಟ್ಟು 2.15 ಲಕ್ಷ ರೂಪಾಯಿ ಮೌಲ್ಯದ 72 ಗ್ರಾಂ ಚಿನ್ನಾಭರಣ ಮತ್ತು ಎರಡು ಪಲ್ಸರ್ ಮೋಟಾರ್ ಬೈಕ್ ಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.. ಇನ್ನೂ 7 ಜನ ಆರೋಪಿತರು ತಲೆ ಮರೆಸಿಕೊಂಡಿದ್ದು , ತಲೆ ಮರೆಸಿಕೊಂಡ ಆರೋಪಿತರನ್ನು ಬಂಧನಕ್ಕಾಗಿ ಚಿಕ್ಕಮಗಳೂರು ಪೋಲಿಸರು ಬಲೆ ಬೀಸಿದ್ದಾರೆ.....

Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು ........
ETV Bharat Logo

Copyright © 2024 Ushodaya Enterprises Pvt. Ltd., All Rights Reserved.