ಚಿಕ್ಕಮಗಳೂರು: ನಗರದಲ್ಲಿ ಇಂದು ಪೊಲೀಸರು ಗಾಂಜಾ ಅಡ್ಡೆ ಮೇಲೆ ದಾಳಿ ಮಾಡಿ, ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ, ಸ್ಥಳೀಯರ ಖಚಿತ ಮಾಹಿತಿ ಮೇರೆಗೆ ಸಿಇಎಸ್ ಪೊಲೀಸರು ದಾಳಿ ಮಾಡಿ, ಆರೋಪಿಗಳನ್ನು ಬಂಧಿಸಿದ್ದಾರೆ. ಕೆ ಬಿ ಹಾಳ್ ಗ್ರಾಮಕ್ಕೆ ಹೋಗುವ ರಸ್ತೆ ಬಳಿ ಓಮ್ನಿ ಕಾರಿನಲ್ಲಿ ಒಟ್ಟು ಆರು ಜನ ಗಾಂಜಾ ಸೊಪ್ಪನ್ನು ಇಟ್ಟುಕೊಂಡು ಮಾರಾಟ ಮಾಡುತ್ತಿದ್ದರು. ಈ ವೇಳೆ ಸಿಇಎನ್ ಪೊಲೀಸರು ದಾಳಿ ಮಾಡಿ, ಆರೋಪಿಗಳಾದ ಸಮೀರ್, ಕುಮಾರ್, ರೋಷನ್ ಎಂಬುವರನ್ನು ಬಂಧಿಸಿದ್ದಾರೆ.
ಆರೋಪಿಗಳಿಂದ 1 ಕೆ.ಜಿ 200 ಗ್ರಾಂ. ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಒಂದು ಒಮ್ನಿ ಕಾರ್, ಒಂದು ಬೈಕ್ಅನ್ನು ಕೂಡಾ ವಶಕ್ಕೆ ಪಡೆದಿದ್ದಾರೆ. ಮೂವರು ಆರೋಪಿಗಳಾದ ಸಾಧಿಕ್, ಮುಜಮ್ಮಿಲ್, ಆಕಿಬ್ ತಲೆಮರೆಸಿಕೊಂಡಿದ್ದಾರೆ. ಸದ್ಯ ಈ ಕುರಿತು ಸಿಇಎನ್ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.