ETV Bharat / state

ಚಿಕ್ಕಮಗಳೂರು: ಪರಾರಿಯಾಗಿದ್ದ ವಿಚಾರಣಾಧೀನ ಕೈದಿ ಪೊಲೀಸರ ವಶಕ್ಕೆ

ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾಧೀನ ಕೈದಿಯನ್ನು ಕಡೂರು ಪೊಲೀಸ್ ಠಾಣಾ ಸಿಬ್ಬಂದಿ ಪತ್ತೆಹಚ್ಚಿದ್ದಾರೆ.

police catch a prisoner  who was escaped from hospital in Chikmagalur
ಎಸ್ಕೇಪ್ ಆಗಿದ್ದ ವಿಚಾರಣಾಧೀನ ಕೈದಿ ಪೊಲೀಸರ ವಶಕ್ಕೆ
author img

By

Published : May 29, 2022, 10:41 AM IST

ಚಿಕ್ಕಮಗಳೂರು: ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ಗಾಂಜಾ ಪ್ರಕರಣದ ವಿಚಾರಣಾಧೀನ ಕೈದಿಯನ್ನು ಚಿಕ್ಕಮಗಳೂರು ಪೊಲೀಸರು ಮತ್ತೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಗ್ಯ ಸಮಸ್ಯೆ ಕಾರಣ ಚಿಕ್ಕಮಗಳೂರಿನ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೈದಿ ಶೌಚಾಲಯಕ್ಕೆ ಹೋಗುವ ನೇಪ ಹೇಳಿ ಆಸ್ಪತ್ರೆಯಿಂದ ಕಾಲ್ಕಿತ್ತಿದ್ದ.

ಹಸುಗಳು ಸಜೀವ ದಹನ: ದನದ ಕೊಟ್ಟಿಗೆಗೆ ಬೆಂಕಿ ತಗುಲಿ ಎರಡು ಹಸುಗಳು ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮ ಪಂಚಾಯತ್​ ವ್ಯಾಪ್ತಿಯ ಶಿವಪುರದಲ್ಲಿ ನಡೆದಿದೆ. ಗ್ರಾಮದ ನಾಗೇಶ್ ಎಂಬುವವರ ಮನೆಯ ಹಿಂಬದಿಯಲ್ಲಿರುವ ಕೊಟ್ಟಿಗೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ತಗುಲಿದೆ.

fire on cattle Barn

ಹೊಗೆ ಕಂಡ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಬೆಂಕಿ ತಗುಲಿರುವುದು ತಿಳಿದಿದೆ. ಸ್ಥಳೀಯರು ಹಾಗು ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಅವಘಡದಲ್ಲಿ ಎರಡು ಜಾನುವಾರುಗಳು ಸಾವನ್ನಪ್ಪಿವೆ.

ಇದನ್ನೂ ಓದಿ: ಸುಬ್ರಹ್ಮಣ್ಯ: ಜ್ಯೂಸ್ ಅಂಗಡಿಗೆ ನುಗ್ಗಿ ಕಬ್ಬು ತಿಂದು ಹೋದ ಕಾಡಾನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.