ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಹಳುವಳ್ಳಿ, ಅರಳಿಮರ, ಗಂಜಲಗೋಡು, ಮತ್ತಿಕೆರೆ ರಸ್ತೆ ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ನಿನ್ನೆ ರಾತ್ರಿಯಿಂದ 50ಕ್ಕೂ ಹೆಚ್ಚು ಜನರು ಶಾಸಕ ಎಂ ಪಿ ಕುಮಾರಸ್ವಾಮಿ ಅವರ ಮನೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಮನವೊಲಿಸಲು ಪ್ರಯತ್ನಿಸಿದರೂ ಪಟ್ಟು ಸಡಿಲಿಸಲಿಲ್ಲ. ಶಾಸಕರು ಬಂದು ಆಶ್ವಾಸನೆ ನೀಡುವವರೆಗೂ ಕದಲುವುದಿಲ್ಲ ಎಂದು ಹಟ ಹಿಡಿದರು. ನಂತರ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಇದನ್ನೂ ಓದಿ : ರಸ್ತೆ ಸರಿಪಡಿಸುವಂತೆ ಆಗ್ರಹಿಸಿ, ಮೂಡಿಗೆರೆ ಶಾಸಕರ ಮನೆ ಮುಂದೆ ಅಹೋರಾತ್ರಿ ಧರಣಿ