ETV Bharat / state

ಮಹಿಳಾ ಪೊಲೀಸ್​ ಸಿಬ್ಬಂದಿಗೆ ಠಾಣೆಯಲ್ಲೇ ಸೀಮಂತ - Chikkamagaluru

ಚಿಕ್ಕಮಗಳೂರು ನಗರದಲ್ಲಿರುವ ಮಹಿಳಾ ಪೊಲೀಸ್​ ಠಾಣೆಯಲ್ಲಿ ಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿರುವ ನೇತ್ರಾವತಿ ಹಾಗೂ ಕಾನ್​ಸ್ಟೇಬಲ್​ಗಳಾದ ರಾಜೇಶ್ವರಿ ಹಾಗೂ ವೇದಾ ಎಂಬ ತುಂಬು ಗರ್ಭಿಣಿಯರಿಗೆ ಸೀಮಂತ ಕಾರ್ಯ ಮಾಡಲಾಗಿದೆ.

Chikkamagaluru
ಮಹಿಳಾ ಪೊಲೀಸ್​ ಸಿಬ್ಬಂದಿಗೆ ಸೀಮಂತ
author img

By

Published : Feb 1, 2021, 7:24 PM IST

Updated : Feb 1, 2021, 7:33 PM IST

ಚಿಕ್ಕಮಗಳೂರು: ನಗರದ ಹನುಮಂತಪ್ಪ ವೃತ್ತದ ಪಕ್ಕದಲ್ಲಿರುವ ತಾಲೂಕು ಕಚೇರಿ ಆವರಣದಲ್ಲಿರುವ ಮಹಿಳಾ ಠಾಣೆಯ ಪೊಲೀಸ್​ ಸಿಬ್ಬಂದಿ ಜನ ಮೆಚ್ಚುವ ಕೆಲಸ ಮಾಡಿದ್ದಾರೆ.

ನಗರದಲ್ಲಿರುವ ಮಹಿಳಾ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿರುವ ನೇತ್ರಾವತಿ ಅವರು ಗರ್ಭಿಣಿಯಾಗಿದ್ದಾರೆ. ಆದರೆ ಮನೆ ಬಿಟ್ಟು ಠಾಣೆಯಲ್ಲಿಯೇ ಹೆಚ್ಚು ಸಮಯ ಕಳೆಯುತ್ತಿರುವ ಹಿನ್ನೆಲೆಯಲ್ಲಿ ಠಾಣೆಯ ಸಿಬ್ಬಂದಿ ಇವರಿಗೆ ಸೀಮಂತ ಕಾರ್ಯ ನೆರವೇರಿಸಿದ್ದಾರೆ. ಇನ್ನು ಇವರ ಜೊತೆಗೆ ಕಾರ್ಯ ನಿರ್ವಹಿಸುತ್ತಿರುವ ಕಾನ್​ಸ್ಟೇಬಲ್​ಗಳಾದ ರಾಜೇಶ್ವರಿ ಹಾಗೂ ವೇದಾ ಎಂಬುವರೂ ಸಹ ತುಂಬು ಗರ್ಭಿಣಿಯರು. ಈ ಹಿನ್ನೆಲೆಯಲ್ಲಿ ಇವರಿಗೂ ಸಹ ಸೀಮಂತ ಮಾಡಲಾಗಿದೆ.

ಮಹಿಳಾ ಪೊಲೀಸ್​ ಸಿಬ್ಬಂದಿಗೆ ಸೀಮಂತ

ಪೊಲೀಸ್ ಸಿಬ್ಬಂದಿಯೇ ಠಾಣೆಯನ್ನು ಅಲಂಕಾರ ಮಾಡಿ, ತಳಿರು ತೋರಣಗಳನ್ನು ಕಟ್ಟಿ ಹಿಂದೂ ಸಂಪ್ರದಾಯದಂತೆ ಸೀಮಂತ ಕಾರ್ಯಕ್ರಮ ಮಾಡಿದ್ದಾರೆ.

Last Updated : Feb 1, 2021, 7:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.