ETV Bharat / state

ಗಾಂಜಾ ಮಾರಾಟ: ಚಿಕ್ಕಮಗಳೂರಲ್ಲಿ ಇಬ್ಬರು ಸೆರೆ - Cannabis Sellers

ಚಿಕ್ಕಮಗಳೂರು ನಗರದ ಸರ್ಕಾರಿ ಬಸ್​ ನಿಲ್ದಾಣದ ಬಳಿ ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಇಬ್ಬರು ಯುವಕರನ್ನು ನಗರ ಪೊಲೀಸರು ಸೆರೆ ಹಿಡಿದಿದ್ದಾರೆ.

Cannabis Sellers
ಅಕ್ರಮವಾಗಿ ಗಾಂಜಾ ಮಾರುತ್ತಿದ್ದ ಇಬ್ಬರು ಸೆರೆ
author img

By

Published : Oct 30, 2020, 3:10 PM IST

ಚಿಕ್ಕಮಗಳೂರು: ಗಾಂಜಾ ಮಾರುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಮಾಲು ವಶಪಡಿಸಿಕೊಂಡಿದ್ದಾರೆ.

ಚಿಕ್ಕಮಗಳೂರು ನಗರದ ಕೆ.ಎಸ್.ಆರ್.ಟಿ.ಸಿ ಬಸ್​​ ನಿಲ್ದಾಣದ ಮುಂಭಾಗದಲ್ಲಿ ಇಬ್ಬರು ಯುವಕರು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಪೊಲೀಸರು, ಸ್ಥಳಕ್ಕೆ ದೌಡಾಯಿಸಿ ಆರೋಪಿಗಳಾದ ರಾಜ್​ಕುಮಾರ್​ ಹಾಗೂ ಆಲಂಖಾನ್​​ ಎಂಬಿಬ್ಬರನ್ನು ಬಂಧಿಸಿದ್ದಾರೆ.

ಬಂಧಿತರಿಂದ ಸುಮಾರು 50 ಸಾವಿರ ಮೌಲ್ಯದ ಎರಡು ಕೆ.ಜಿ ಗಾಂಜಾ ಸೊಪ್ಪನ್ನು ವಶಕ್ಕೆ ಪಡೆದಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.