ETV Bharat / state

ದಿ. ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ವಿಧಿವಶ...

author img

By

Published : Dec 14, 2021, 10:11 AM IST

Updated : Dec 14, 2021, 10:33 AM IST

ನಾಡಿನ ಮೇರುಸಾಹಿತಿ ದಿ. ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ, ಲೇಖಕಿ ರಾಜೇಶ್ವರಿ ತೇಜಸ್ವಿ (85) ಅವರು ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Rajeshwari Tejaswi died
ರಾಜೇಶ್ವರಿ ನಿಧನ

ಬೆಂಗಳೂರು/ಚಿಕ್ಕಮಗಳೂರು: ಕಾಡಿನ‌ಸಂತ, ಕನ್ನಡ ಸಾಹಿತ್ಯ ಲೋಕದ ಮೇರು ಸಾಹಿತಿ ದಿ. ಪೂರ್ಣಚಂದ್ರ ತೇಜಸ್ವಿ ಅವರ ಧರ್ಮಪತ್ನಿ, ಲೇಖಕಿ ರಾಜೇಶ್ವರಿ ತೇಜಸ್ವಿ (85) ಅವರು ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Rajeshwari Tejaswi died
ರಾಜೇಶ್ವರಿ ತೇಜಸ್ವಿ ಇನ್ನಿಲ್ಲ

ರಾಜೇಶ್ವರಿ ತೇಜಸ್ವಿ ಅವರು 1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯಂ ಹೊಸ ಬಡಾವಣೆಯಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದವರು. ಹೆಣ್ಣು ಮಕ್ಕಳಿಗೂ ವಿದ್ಯಾಭ್ಯಾಸ ನೀಡಬೇಕೆನ್ನುವ ತಮ್ಮ ತಂದೆಯ ಉದಾತ್ತ ಧ್ಯೇಯದಿಂದಾಗಿ ಅವರು ತತ್ವ ಶಾಸ್ತ್ರದಲ್ಲಿ ಆನರ್ಸ್ ಮತ್ತು ಎಂ.ಎ ಮಾಡಲು ಮಾನಸ ಗಂಗೋತ್ರಿ ಮೈಸೂರಿಗೆ ಬಂದರು. ಆ ನಂತರ ಅಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಪರಿಚಯವಾಗಿ ಇಬ್ಬರೂ ಪ್ರೀತಿಸಿ 1966ರಲ್ಲಿ ವಿವಾಹವಾದರು.

‘ನನ್ನ ತೇಜಸ್ವಿ’ ಎಂಬುದು ರಾಜೇಶ್ವರಿ ಅವರ ಮೊಟ್ಟ ಮೊದಲ ಪುಸ್ತಕವಾಗಿದೆ. 'ನಮ್ಮ ಮನೆಗೂ ಬಂದರು ಗಾಂಧೀಜಿ’ ಇವರ ಎರಡನೇಯ ಪುಸ್ತಕವಾಗಿದ್ದು, ರಾಜೇಶ್ವರಿ ಅವರಿಗೆ ಇಬ್ಬರು ಮಕ್ಕಳಿದ್ದು ಇಬ್ಬರೂ ಸಾಫ್ಟ್​ವೇರ್ ಇಂಜಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತೇಜಸ್ವಿಯವರು ಬದುಕಿದ್ದಾರೆ ಎಂದೇ ನಾನು ಬದುಕುತ್ತಿದ್ದೇನೆ. ಅವರಿಲ್ಲ ಎಂದು ನಾನೂ ಯಾವಾಗಲೂ ಅಂದುಕೊಂಡೇ ಇಲ್ಲ. ಇಂದಿಗೂ ರಾಜ್ಯದ ಮೂಲೆ ಮೂಲೆಗಳಿಂದ ತೇಜಸ್ವಿ ಅಭಿಮಾನಿಗಳು ಈ ಮನೆಗೆ ಬರುತ್ತಲೇ ಇರುತ್ತಾರೆ. ಅವರ ಪ್ರೀತಿ ಕಂಡು ನನಗೆ ಹೃದಯ ತುಂಬಿ ಬರುತ್ತದೆ" ಎನ್ನುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.

ಇದನ್ನೂ ಓದಿ: Gold smuggling: ರಾಡ್, ಸ್ಟಿರಿಯೊ ಕೇಬಲ್ ಗಳಲ್ಲಿ ಅಕ್ರಮ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿ ಮಂಗಳೂರಲ್ಲಿ ವಶಕ್ಕೆ

ಬೆಂಗಳೂರಿನ ಹೆಚ್​​ಎಸ್​​ಆರ್ ಲೇಔಟ್​​ನಲ್ಲಿ ಸಂಜೆ 5:30ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಅವರ ದೇಹದಾನ ಮಾಡಲು ಕುಟುಂಬ ನಿರ್ಧರಿಸಿದ್ದು, ಸದ್ಯ ತೀವ್ರ ಜ್ವರದಿಂದ ಬಳಲುತ್ತಿದ್ದ ಇವರು ಮೂಡಿಗೆರೆ ತಾಲೂಕಿನ ಹ್ಯಾಂಡ್ ಪೋಸ್ಟ್​​ನ ತೋಟದ ಮನೆಯಲ್ಲಿ ವಾಸವಾಗಿದ್ದರು.

Last Updated : Dec 14, 2021, 10:33 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.