ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಭಾರೀ ಗಾಳಿ ಮಳೆಗೆ ಮನೆ ಮೇಲೆ ವಿದ್ಯುತ್ ಕಂಬ ಬಿದ್ದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕ್ಮಕಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಈ ಬಗ್ಗೆ ವಿಷಯ ತಿಳಿಸಿದರೂ ಕೂಡ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಬಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮರದ ತುಂಡು ಅಡ್ಡ ಇಟ್ಟು ರಸ್ತೆ ತಡೆದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಸ್ಥಳಕ್ಕೆ ಬಂದ ಬಣಕಲ್ ಪೊಲೀಸರು ರಾಷ್ಟ್ರೀಯ ಹೆದ್ದಾರಿ ಖುಲ್ಲಾ ಮಾಡಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಬಳಿಕ ತಡವಾಗಿ ಬಂದ ಮೆಸ್ಕಾಂ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.