ETV Bharat / state

ಅಕಾಲಿಕ ಮಳೆಯಿಂದ ಬೆಳೆ ನಾಶ: ಮನ ನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ - farmer committed suicide by consuming poison

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಗಳಗಂಡಿ ಗ್ರಾಮದ ರೈತ ಮಲ್ಲಪ್ಪ ಗೌಡ (63) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

premature-rain-farmer-committed-suicide-by-consuming-poison
ವಿಷ ಸೇವಿಸಿ ರೈತ ಆತ್ಮಹತ್ಯೆ
author img

By

Published : Jan 12, 2021, 8:03 PM IST

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಮೂರು ದಿನಗಳ ಕಾಲ ಸುರಿದ ಅಕಾಲಿಕ ಮಳೆಗೆ ಬೆಳೆ ನಾಶವಾಗಿರುವುದರಿಂದ ರೈತರೊಬ್ಬರು ಮನ ನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಕೊಪ್ಪ ತಾಲೂಕಿನ ಅಗಳಗಂಡಿ ಗ್ರಾಮದ ರೈತ ಮಲ್ಲಪ್ಪ ಗೌಡ (63) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವಿಸಿ ಒದ್ದಾಡುತ್ತಿದ್ದ ಮಲ್ಲಪ್ಪನನ್ನು ಕಂಡ ಮನೆಯ ಸದಸ್ಯರು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತ ರೈತನಿಗೆ ನಾಲ್ಕು ಎಕರೆ ಕಾಫಿ ತೋಟವಿದ್ದು, ಅಕಾಲಿಕ ಮಳೆಗೆ ಕಾಫಿ ಹಣ್ಣುಗಳು ನೆಲಕ್ಕೆ ಉರುಳಿವೆ. ಈ ಬಾರಿಯ ಫಸಲನ್ನು ನಂಬಿ ಬ್ಯಾಂಕ್‌ಗಳಲ್ಲಿ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದರು. ಜಯಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಓದಿ: 5 ದಿನವಾದ್ರೂ ಪತ್ತೆಯಾಗದ ಚಿಕ್ಕಜಾಲ ಇನ್ಸ್​ಪೆಕ್ಟರ್ ​: ಡಿಜಿ, ಐಜಿಪಿಗೆ ವರದಿ ಸಲ್ಲಿಸಲು ಮುಂದಾದ ಎಸಿಬಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.