ETV Bharat / state

ಶೃಂಗೇರಿಗೆ ರಾಷ್ಟ್ರಪತಿ ಭೇಟಿ ಹಿನ್ನೆಲೆ 2 ದಿನ ಪಟ್ಟಣ ಬಂದ್​: ವ್ಯಾಪಾರಸ್ಥರ ಆಕ್ರೋಶ - president ramnath kovind visit to sringeri sharadapita

ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮಿಸುತ್ತಿರುವ ಹಿನ್ನೆಲೆ ಚಿಕ್ಕಮಗಳೂರು ಜಿಲ್ಲಾಡಳಿತ ಇಂದು ಮತ್ತು ನಾಳೆ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡುವಂತೆ ಸೂಚನೆ ನೀಡಿದ್ದು, ವ್ಯಾಪಾರಸ್ಥರು ಆಕ್ರೋಶ ಹೊರಹಾಕಿದ್ದಾರೆ.

president ramnath kovind to visit sringeri
ರಾಷ್ಟ್ರಪತಿ ಭೇಟಿ ಹಿನ್ನೆಲೆ ಶೃಂಗೇರಿ ಬಂದ್​
author img

By

Published : Oct 7, 2021, 6:46 PM IST

ಚಿಕ್ಕಮಗಳೂರು: ನಾಳೆ ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಭೇಟಿ ಹಿನ್ನೆಲೆ, ಇಂದು ಮತ್ತು ನಾಳೆ ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಮಾಡಿದೆ.

ರಾಷ್ಟ್ರಪತಿ ಭೇಟಿ ಹಿನ್ನೆಲೆ ಶೃಂಗೇರಿ ಬಂದ್​ ಮಾಡಿ ಆದೇಶ​

ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದು, ವ್ಯಾಪಾರಸ್ಥರು ಸಂಕಷ್ಟ ಎದುರಿಸುವಂತಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈಗಾಗಲೇ ವ್ಯಾಪಾರಸ್ಥರು ನಷ್ಟವನ್ನು ಅನುಭವಿಸುತ್ತಿದ್ದು, ನವರಾತ್ರಿ ಸಂದರ್ಭದಲ್ಲಿ ಮತ್ತೆ 2 ದಿನ ಅಂಗಡಿ ಮುಂಗಟ್ಟು ಮುಚ್ಚಲು ಆದೇಶ ಆದೇಶ ಹೊರಡಿಸಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಹೀಗಾಗಿ ಜಿಲ್ಲಾಡಳಿತದ ಆದೇಶಕ್ಕೆ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಎರಡು ದಿನದ ನಷ್ಟವನ್ನು ಕಟ್ಟಿಕೊಡುವಂತೆ ಆಗ್ರಹ ಪಡಿಸುತ್ತಿದ್ದಾರೆ. ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಲಾಗಿದ್ದು, ಜನಸಾಮಾನ್ಯರು, ರೈತರು ಹಾಗೂ ವ್ಯಾಪಾರಸ್ಥರಿಗೆ ತೊಂದರೆ ಕೊಡುತ್ತಿರುವುದಕ್ಕೆ ಜಿಲ್ಲಾಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ:ನಾಳೆ ಶೃಂಗೇರಿ ಶಾರದಾ ಪೀಠಕ್ಕೆ ರಾಷ್ಟ್ರಪತಿ ಭೇಟಿ: ಹೆಲಿಪ್ಯಾಡ್​​ಗೆ ಸಿದ್ಧತೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.